ಕರ್ನಾಟಕ: ಎರಡು ದಿನ ರಾಜ್ಯದ 6 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಬೆಂಗಳೂರು, ಮಾರ್ಚ್ 31: ಮುಂದಿನ ಎರಡು ದಿನಗಳ ಕಾಲ ರಾಜ್ಯದ 6 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮಳೆಯಾಗಲಿದೆ. ಕಲಬುರಗಿಯಲ್ಲಿ 41.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದಲ್ಲಿ ವರುಣನ ಅಬ್ಬರ: ಸಿಡಿಲಿಗೆ 17 ಕುರಿ, 2 ಜಾನುವಾರು ಸಾವು; ಇಂದು ಕೂಡಾ ಮಳೆಯಾಗುವ ಸಾಧ್ಯತೆ
ಕರ್ನಾಟಕದಲ್ಲಿ ದಿನೇ ದಿನೇ ಬಿಸಿಯೇರುತ್ತಿದೆ. ಅದರಲ್ಲೂ ರಾಜ್ಯದ ಉತ್ತರ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಉಷ್ಣಾಂಶ ದಾಖಲಾಗುತ್ತಿದೆ. ಈ ಪೈಕಿ ಕಲಬುರಗಿ ಜಿಲ್ಲೆ ಕೆಂಡವಾಗತೊಡಗಿದೆ. ತಾಪಮಾನ ಕ್ರಮೇಣ ಹೆಚ್ಚಾಗುತ್ತಿದೆ.

ಎಲ್ಲೆಲ್ಲಿ ಮಳೆಯಾಗಿದೆ
ಮಂಗಳೂರು, ಕಿರವತ್ತಿ, ಶಿರಸಿ, ಮಾಣಿ, ಕಳಸ, ಉಪ್ಪಿನಂಗಡಿ, ವಿಟ್ಲ, ಕುಂದಾಪುರ, ಕಾರ್ಕಳ, ಪಣಂಬೂರು, ಸಿದ್ದಾಪುರ, ಯಲ್ಲಾಪುರ, ಹಳಿಯಾಳ, ತಾಳಗುಪ್ಪದಲ್ಲಿ ಮಳೆಯಾಗಿದೆ.

ಮುಂದಿನ ಒಂದು ದಿನದಲ್ಲಿ ಎಲ್ಲೆಲ್ಲಿ ಮಳೆಯಾಗಬಹುದು
ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರಿನಲ್ಲಿ ಮುಂದಿನ ಒಂದು ದಿನದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ವಾತಾವರಣ ಹೇಗಿದೆ?
ಬೆಂಗಳೂರು ಹವಾಮಾನ ವರದಿ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬಿಸಿಲಿನ ಬೇಗೆಯಿಂದ ಜನರು ಹೈರಾಣಾಗುತ್ತಿದ್ದು, ವಾಡಿಕೆ ಪ್ರಮಾಣಕ್ಕಿಂತ ಹೆಚ್ಚಾಗಿದೆ. ಈ ತಾಪಮಾನ ಪ್ರಮಾಣ ಮುಂದಿನ ಒಂದು ವಾರ ಹೀಗೆಯೇ ಮುಂದುವರೆಯಲಿದೆ.
ಸೋಮವಾರ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಸಾರ್ವಕಾಲಿಕ ದಾಖಲೆಯತ್ತ(37.3ಡಿ.ಸೆ) ಸಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಮಾರ್ಚ್ನಲ್ಲಿ ಮೂರನೇ ಬಾರಿ ದಾಖಲಾದ ಅರಿ ಗರಿಷ್ಠ ತಾಪಮಾನ ಇದಾಗಿದೆ. ಈ ಮೊದಲು 2012ರಲ್ಲಿ 35.6 ಡಿಗ್ರಿ ಸೆಲ್ಸಿಯಸ್, 2016ರ ಮಾರ್ಚ್ನಲ್ಲಿ ಇಷ್ಟೇ ಪ್ರಮಾಣದ ತಾಪಮಾನ ದಾಖಲಾಗಿತ್ತು.

ಬೆಂಗಳೂರಲ್ಲಿ ಏಪ್ರಿಲ್ 1 ರಿಂದ ಏರಲಿದೆ ಬಿಸಿಲಿನ ಧಗೆ
ಬುಧವಾರ ನಗರದಲ್ಲಿ ಬಿಸಿಲು ಹೀಗೆಯೇ ಮುಂದುವರೆಯಲಿದೆ. ಏಪ್ರಿಲ್ 1 ರಿಂದ 3ರವರೆಗೆ ತಾಪಮಾನದಲ್ಲಿ ಮತ್ತಷ್ಟು ಏರಿಕೆಯಾಗಲಿದೆ. 3 ದಿನ ಕೂಡ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 36 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ನಂತರ ಏ.4, ಏಪ್ರಿಲ್ 5ರಂದು ಗರಿಷ್ಠ ಪ್ರಮಾಣದಲ್ಲಿ ತುಸು ಇಳಿಕೆಯಾಗಿ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.