ಎರಡು ದಿನ ಕರ್ನಾಟಕದ ಕರಾವಳಿಗೆ ಮಳೆಯ ಆರೆಂಜ್ ಅಲರ್ಟ್

ಬೆಂಗಳೂರು, ಜುಲೈ 25: ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಇರುವುದರಿಂದ ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ.

Recommended Video

      ಭಾರತದಲ್ಲಿ ಚೀನಾ ವ್ಯವಹಾರ ಇನ್ನು ಮುಂದೆ ಸುಲಭವಲ್ಲ | Oneindia Kannada

      ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಪ್ರಮಾಣದ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದೆ.

      ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 25 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ಕೊಡಗಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

      ಕಲಬುರಗಿಯಲ್ಲಿ ಐವರು ಪ್ರಾಣಾಪಾಯದಿಂದ ಪಾರು

      ಕಲಬುರಗಿಯಲ್ಲಿ ಐವರು ಪ್ರಾಣಾಪಾಯದಿಂದ ಪಾರು

      ಕಲಬುರಗಿ ಜಿಲ್ಲೆಯ ವಿವಿಧೆಡೆ ಶುಕ್ರವಾರ ಬೆಳಗ್ಗೆ ಧಾರಾಕಾರ ಮಳೆಯಾಗಿದೆ. ಅಫ್ಜಲ್‌ಪುರ ತಾಲೂಕಿನ ಬಡದಾಳ ಗ್ರಾಮದ ದೊಡ್ಡ ಹಳ್ಳದಲ್ಲಿ ಧರ್ಮಸ್ಥಳಗ್ರಾಮಾಭಿವೃದ್ಧಿ ಸಂಸ್ಥೆಯ ವಾಹನ ಸಿಲುಕಿಕೊಂಡು ಓರ್ವ ಮಹಿಳೆ ಸೇರಿ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

      ಕರ್ನಾಟಕದಲ್ಲಿ ಯಾವ್ಯಾವ ಪ್ರದೇಶದಲ್ಲಿ ಹೆಚ್ಚು ಮಳೆ

      ಕರ್ನಾಟಕದಲ್ಲಿ ಯಾವ್ಯಾವ ಪ್ರದೇಶದಲ್ಲಿ ಹೆಚ್ಚು ಮಳೆ

      ಮಳೆ ಸಂಬಂಧಿತ ದುರ್ಘಟನೆಗೆ ರಾಯಚೂರು ಜಿಲ್ಲೆಯಲ್ಲಿ ಶುಕ್ರವಾರ ನಾಲ್ವರು ಸಾವನ್ನಪ್ಪಿದ್ದಾರೆ. ಉಳಿದಂತೆ ಕಲಬುರಗಿ, ತುಮಕೂರಿನಲ್ಲಿ ಧಾರಾಕಾರ ಮಳೆಯಾಗಿದ್ದರೆ ಕಡೂರಿನಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ.

      ಇಂದು ಹೆಚ್ಚಿನ ಮಳೆ ಸಾಧ್ಯತೆ

      ಇಂದು ಹೆಚ್ಚಿನ ಮಳೆ ಸಾಧ್ಯತೆ

      ಉತ್ತರ ಕರ್ನಾಟಕ ಹಾಗೂ ಉತ್ತರ ಕನ್ನಡದ ಹಲವು ಭಾಗಗಲ್ಲಿ ಶುಕ್ರವಾರ ಮಳೆಯಾಗಿದೆ. ಶನಿವಾರವೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

      ಕಲಬುರಗಿ ಸುತ್ತಮುತ್ತಲಿನ ಪರಿಸ್ಥಿತಿ ಹೇಗಿದೆ?

      ಕಲಬುರಗಿ ಸುತ್ತಮುತ್ತಲಿನ ಪರಿಸ್ಥಿತಿ ಹೇಗಿದೆ?

      ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆ ಕಲಮಾಪುರ, ಆಳಂದ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗಿದೆ. ಹಳ್ಳ, ನಾಲೆಗಳು ತುಂಬಿ ಹರಿಯುತ್ತಿವೆ.
      ಭೀಮಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಸೊನ್ನ ಬ್ಯಾರೇಜ್‌ನಿಂದ 15 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಬೆಣ್ಣೆತೊರಾ ಜಲಾಶಯ ಭರ್ತಿಯಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+