ಮೇ 16ರಂದು ರಾಜ್ಯದಲ್ಲಿ ಮಹಾ ಮಳೆ, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಬೆಂಗಳೂರು, ಮೇ 12: ರಾಜ್ಯದಲ್ಲಿ ಮೇ 16 ರಂದು ರಾಜ್ಯದಲ್ಲಿ ಭಾರಿ ಮಳೆ ಸುರಿಯಲಿದ್ದು, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಮೇ 16ರಂದು ಚಂಡಮಾರುತ ಬಂದು ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಕರ್ನಾಟಕ, ಗೋವಾ, ಮಹಾರಾಷ್ಟ್ರ, ಕೇರಳದಲ್ಲಿ ಮಳೆಯಾಗಲಿದೆ.
ಇನ್ನುಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ತುಮಕೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ.

ಮೋಡಕವಿದ ವಾತಾವರಣ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ಎಚ್‌ಎಎಲ್‌ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

48 ಗಂಟೆ ರಾಜ್ಯದ ವಾತಾವರಣ ಹೇಗಿರಲಿದೆ?
ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಕೆಲವು ಭಾಗಗಳಲ್ಲಿ ಮಳೆ ಇನ್ನು ಕೆಲವು ಭಾಗಗಳಲ್ಲಿ ಒಣಹವೆ ಮುಂದುವರೆಯಲಿದೆ.
ಕಲಬುರಗಿಯಲ್ಲಿ 43.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಎಲ್ಲೆಲ್ಲಿ ಮಳೆ?
ಹುಕ್ಕೇರಿ, ಕಿರವತ್ತಿ, ಹಿರೇಕೆರೂರು, ಭಾಗಮಂಡಲ, ಕಳಸ, ಕೊಟ್ಟಿಗೆಹಾರ, ಕೃಷ್ಣರಾಜಪೇಟೆ, ಕಾರ್ಕಳ, ಮೂರ್ನಾಡು, ಸಿಎನ್ ಹಳ್ಳಿ, ಯಲ್ಲಾಪುರ, ಪುತ್ತೂರು, ಶೃಂಗೇರಿ, ರಾಮನಗರ, ಗೋಪಾಲ್‌ನಗರದಲ್ಲಿ ಮಳೆಯಾಗಿದೆ.
Recommended Video

ಎಲ್ಲೆಲ್ಲಿ ಮಳೆಯಾಗಲಿದೆ?
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಇನ್ನುಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ತುಮಕೂರು, ರಾಮನಗರದಲ್ಲಿ ಸಾಧಾರಣ ಮಳೆಯಾಗಲಿದೆ.











Click it and Unblock the Notifications