• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜೂನ್ 16ರವರೆಗೂ ಈ ಜಿಲ್ಲೆಗಳಲ್ಲಿ ಮಳೆಯ ಆರೆಂಜ್ ಅಲರ್ಟ್

|
Google Oneindia Kannada News

ಬೆಂಗಳೂರು, ಜೂನ್ 12: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಹಲವು ಕಡೆಗಳಲ್ಲಿ ಮಳೆ ಶುರುವಾಗಿದೆ. ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

ರಾಜ್ಯ ಕರಾವಳಿ ಭಾಗದಲ್ಲಿ ಇಂದು ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಜೂನ್ 13 ಹಾಗೂ 14ರಂದು ಮಳೆಯ ಆರ್ಭಟ ಜೋರುರಾಜ್ಯದಲ್ಲಿ ಜೂನ್ 13 ಹಾಗೂ 14ರಂದು ಮಳೆಯ ಆರ್ಭಟ ಜೋರು

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಸಂಜೆಯ ಸಮಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

      Renukacharya ಅವರು ಹೋಮ ಮಾಡಿ ಸಂಕಷ್ಟಕ್ಕೀಡಾದರು | Oneindia Kannada
      ಕರಾವಳಿ ಭಾಗದಲ್ಲಿ ನಾಲ್ಕು ದಿನ ಮಳೆ

      ಕರಾವಳಿ ಭಾಗದಲ್ಲಿ ನಾಲ್ಕು ದಿನ ಮಳೆ

      ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಜೂನ್ 12 ರಂದು ಬೆಳಗ್ಗೆ 8.30ರಿಂದ ಜೂನ್ 16ರ ಬೆಳಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಮಳೆಯ ಜತೆ ಗಾಳಿ ಮತ್ತು ಸಿಡಿಲು ಕೂಡ ಇರಲಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಸಾಧ್ಯತೆ ಇದೆ.

      ಯಾವ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

      ಯಾವ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

      ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

      ಬೆಂಗಳೂರು ಹವಾಮಾನ ವರದಿ

      ಬೆಂಗಳೂರು ಹವಾಮಾನ ವರದಿ

      ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೆಐಎಎಲ್‌ನಲ್ಲಿ 29.4 ಗರಿಷ್ಠ ಉಷ್ಣಾಂಶ ದಾಖಲಾಗಿದೆ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

      ಮಳೆಯಾಗಿರುವ ಪ್ರದೇಶಗಳು

      ಮಳೆಯಾಗಿರುವ ಪ್ರದೇಶಗಳು

      ಪಣಂಬೂರು, ಕಾರ್ಕಳ, ಸುಳ್ಯ, ಮಂಗಳೂರು, ಕುಂದಾಪುರ, ಕೋಟ, ಮೂಡುಬಿದಿರೆ, ಭಟ್ಕಳ, ಮುಲ್ಕಿ, ಸುಬ್ರಹ್ಮಣ್ಯ, ಬೀದರ್, ಭಾಗಮಂಡಲ, ಕದ್ರ, ಸಿದ್ದಾಪುರ, ಕಳಸ, ಕೊಟ್ಟಿಗೆಹಾರ, ಜಯಪುರ, ಚಿಂಚೋಳಿ, ಕಾರವಾರದಲ್ಲಿ ಮಳೆಯಾಗಿದೆ.

      English summary
      Meteorological department issued rain Orange Alert for 7 districts of Karnataka till June 16.
      ತಾಜಾ ಸುದ್ದಿ ತಕ್ಷಣ ಪಡೆಯಿರಿ
      Enable
      x
      Notification Settings X
      Time Settings
      Done
      Clear Notification X
      Do you want to clear all the notifications from your inbox?
      Settings X