Rain Alert: ಏಪ್ರಿಲ್ ಮತ್ತು ಜೂನ್‌ನಲ್ಲಿ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೇಸಿಗೆಯಲ್ಲೇ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೇಸಿಗೆಯ ತೀವ್ರತೆ ಕೂಡ ಹೆಚ್ಚಾಗಲಿದ್ದು, ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಏಪ್ರಿಲ್ - ಜೂನ್ ತಿಂಗಳಿನಲ್ಲಿ ಉತ್ತರ ಒಳನಾಡು ಜಿಲ್ಲೆಗಳ ಹೆಚ್ಚಿನ ಭಾಗದಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಗರಿಷ್ಠ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಲೆನಾಡು ಮತ್ತು ಕರಾವಳಿಯ ಬಹುತೇಕ ಭಾಗಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ತಾಪಮಾನ ಇರಲಿದೆ ಎಂದು ಮುನ್ಸೂಚನೆ ನೀಡಿದೆ. ಸಾಮಾನ್ಯಕ್ಕಿಂತ ಕನಿಷ್ಠ ತಾಪಮಾನ ಇರಲಿದೆ ಎಂದು ಹೇಳಿದೆ.

ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ 1 ರಿಂದ 3 ದಿನಗಳು ಬಿಸಿಗಾಳಿ ಬೀಸುವ ಸಾಧ್ಯತೆ ಇದೆ. ಶಾಖದ ಅಲೆ ಸಂದರ್ಭದಲ್ಲಿ ಅಧಿಕ ತಾಪಮಾನ ಇರಲಿದ್ದು, ವೃದ್ಧರು, ಮಕ್ಕಳು ಹಾಗೂ ಅನಾರೋಗ್ಯಪೀಡಿತರ ಮೇಲೆ ಪರಿಣಾಮ ಬೀರಲಿದ್ದು. ಶಾಖದೊತ್ತಡ, ನಿರ್ಜಲೀಕರಣ, ಆಯಾಸ ಕಂಡುಬರಲಿದ್ದು ಆರೋಗ್ಯ ಕಾಪಾಡಿಕೊಳ್ಳಲು ಗಮನ ಹರಿಸುವಂತೆ ಮನವಿ ಮಾಡಲಾಗಿದೆ.
ಮಳೆ ಮುನ್ಸೂಚನೆ
ರಾಜ್ಯದ ಉತ್ತರ ಒಳನಾಡಿನ ಕೆಲವು ಭಾಗಗಳನ್ನು ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಯುಗಾದಿಯಂದೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಬೆಳಗಾವಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಸೋಮವಾರ ಕೂಡ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications