Rain: ರಾಜ್ಯದ ವಿವಿಧೆಡೆ ಮುಂದುವರಿದ ಮಳೆ, ಬೆಂಗಳೂರಲ್ಲಿ ಹೇಗಿದೆ ವೆದರ್

ಕರ್ನಾಟಕದ ವಿವಿಧೆಡೆ ಮಳೆ ಮುಂದುವರಿದಿದೆ. ಆದರೆ, ನವೆಂಬರ್‌ 24ರ ವರೆಗೂ ಬಹುತೇಕ ಒಣಹವೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕೊಟ್ಟಿದೆ. ರಾಜ್ಯದಲ್ಲಿ ಚಳಿಗಾಲ ಪ್ರಾರಂಭವಾಗಿದ್ದರೂ, ಮಳೆ ಮುಂದುವರಿದಿದೆ. ಕರ್ನಾಟಕದ ವಿವಿಧ ಭಾಗದಲ್ಲಿ ಬಿಟ್ಟು ಬಿಡದಂತೆ ಮಳೆಯಾಗುತ್ತಿದ್ದು, ಇದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಅಕಾಲಿಕ ಮಳೆಯಿಂದ ಬೆಳೆ ಹಾನಿಯಾಗುತ್ತಿದ್ದು, ರೈತರು ತಾವು ಬೆಳೆದ ಬೆಳೆ ಕೈಗೆ ಸಿಗದೆ ಸಂಕಷ್ಟದಲ್ಲಿ ಇದ್ದಾರೆ.

ಸೋಮವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿರುವುದು ವರದಿಯಾಗಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಚಿತ್ರದುರ್ಗ ಸೇರಿದಂತೆ ವಿವಿಧ ಭಾಗದಲ್ಲಿ ಭರ್ಜರಿ ಮಳೆಯಾಗಿದೆ.

Rain Rain continues in various parts of Karanatak how is it in Bengaluru

ಹವಾಮಾನ ಹೇಗಿದೆ: ಚಂಡಮಾರುತದ ಪರಿಚಲನೆಯು ಕೊಮೊರಿನ್ ಪ್ರದೇಶ ಹಾಗೂ ಸಮೀಪದಲ್ಲಿ ಸರಾಸರಿ ಸಮುದ್ರದ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ರಾಜ್ಯದಲ್ಲಿ ಅತೀ ಹೆಚ್ಚಿನ ಗರಿಷ್ಠ ಉಷ್ಣಾಂಶವು 35.8 ಡಿಗ್ರಿ ಸೆಲ್ಸಿಯಸ್‌ ಕಾರವಾರದಲ್ಲಿ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಅತೀ ಕಡಿಮೆ ಉಷ್ಣಾಂಶ 12.5 ಡಿಗ್ರಿ ಸೆಲ್ಸಿಯಸ್‌ ಬೀದರ್‌ನಲ್ಲಿ ದಾಖಲಾಗಿದೆ.

ನವೆಂಬರ್‌ 20ರವರೆಗೆ ಹೇಗಿದೆ ಹವಾಮಾನ: ಇನ್ನು ನವೆಂಬರ್‌ 20ರ ವರೆಗೆ ರಾಜ್ಯದಲ್ಲಿ ಸಾಧಾರಣ ವಾತಾವರಣ ಇರಲಿದೆ. ಎಲ್ಲೂ ಭಾರೀ ಮಳೆ ಅಥವಾ ಮಹತ್ವದ ಬೆಳವಣಿಗೆ ಇರುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಹೇಳಿದೆ. ಈ ಅವಧಿಯಲ್ಲಿ ರಾಜ್ಯದ ಹವಾಮಾನದಲ್ಲಿ ಯಾವುದೇ ಮಹತ್ವದ ಬದಲಾವಣೆ ನಿರೀಕ್ಷಿಸಲಾಗಿಲ್ಲ.

ಬೆಂಗಳೂರು ಹವಾಮಾನ ವರದಿ

ಇನ್ನು ಬೆಂಗಳೂರಿನಲ್ಲೂ ನವೆಂಬರ್‌ 19 ಹಾಗೂ ನವೆಂಬರ್‌ 20ರಂದು ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ 24 ಗಂಟೆ: ಮುಂದಿನ 24 ಗಂಟೆಯ ಅವಧಿಯಲ್ಲಿ ಭಾಗಶಃ ಮೋಡ ಮುಸುಕಿದ ವಾತಾವರಣ ಇರಲಿದೆ. ಅಲ್ಲದೇ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಭಾಗದಲ್ಲಿ ಬೆಳಿಗ್ಗೆ ಸಮಯದಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ. ಗರಿಷ್ಠ ತಾಪಮಾನವು 28 ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 48 ಗಂಟೆ: ಇನ್ನು ಮುಂದಿನ 48 ಗಂಟೆಯ ಅವಧಿಯಲ್ಲೂ ಬೆಂಗಳೂರಿನ ಹವಾಮಾನದಲ್ಲಿ ಮಹತ್ವದ ಬದಲಾವಣೆ ಇಲ್ಲ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಭಾಗದಲ್ಲಿ ಬೆಳಿಗ್ಗೆ ಸಮಯದಲ್ಲಿ ಮಂಜು ಮುಸುಕಿದ ವಾತಾವರಣ ಇರುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನವು 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನವು 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಯ ಅವಧಿಯಲ್ಲಿ ಕರಾವಳಿಯಲ್ಲಿ ಈಶಾನ್ಯ ಮಾನ್ಸೂನ್‌ ಸಾಮಾನ್ಯವಾಗಿದ್ದು, ಒಳನಾಡಿನಲ್ಲಿ ದುರ್ಬಲವಾಗಿತ್ತು. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 5 ಸೆಂ.ಮೀ ಮಳೆಯಾಗಿದೆ. ಉಪ್ಪಿನಗಂಡಿ 2 ಸೆಂ.ಮೀ, ಹಾರಂಗಿಯಲ್ಲಿ 2 ಹಾಗೂ ಪಣಂಬೂರು 1 ಸೆಂ.ಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+