ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವರುಣನ ಆರ್ಭಟ: ಉತ್ತರ ಕರ್ನಾಟಕದಲ್ಲಿ ಮಳೆ ಮತ್ತಷ್ಟು ಹೆಚ್ಚಳ ಸಾಧ್ಯತೆ

|
Google Oneindia Kannada News

Recommended Video

North Karnataka Floods : ಉತ್ತರ ಕರ್ನಾಟಕದಲ್ಲಿ ಮತ್ತಷ್ಟು ಮಳೆ ಹೆಚ್ಚಾಗುವ ಸಾಧ್ಯತೆ

ಬೆಂಗಳೂರು, ಆಗಸ್ಟ್ 9: ಉತ್ತರ ಕರ್ನಾಟಕದಲ್ಲಂತೂ ಮಳೆ ಕಡಿಮೆಯಾಗುವ ಮಾತೇ ಇಲ್ಲ. ಕಣ್ಮುಚ್ಚಿ ಧೋ ಎಂದು ಮಳೆ ಸುರಿಯುತ್ತಲೇ ಇದೆ. ಮುಂದಿನ 24 ಗಂಟೆಗಳಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವರುಣನ ಆರ್ಭಟಕ್ಕೆ ಉತ್ತರ ಕರ್ನಾಟಕ ನಲುಗಿ ಹೋಗಿದೆ. ಇಂದು ಮತ್ತು ಶನಿವಾರವೂ ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದ 8 ಜಿಲ್ಲೆಗಳಲ್ಲಿ ರೆಟ್ ಅಲರ್ಟ್ ಘೋಷಿಸಲಾಗಿದೆ.

ಅಬ್ಬಾ, ನೀರು ತುಂಬಿದ ಸೇತುವೆ ಮೇಲೇ ಬಸ್ ಸಂಚಾರ ಅಬ್ಬಾ, ನೀರು ತುಂಬಿದ ಸೇತುವೆ ಮೇಲೇ ಬಸ್ ಸಂಚಾರ

ಉತ್ತರ ಕರ್ನಾಟಕ, ಮಲೆನಾಡು, ಕರಾವಳಿಯಲ್ಲಿ ಉಂಟಾಗಿರುವ ಪ್ರವಾಹ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ಕೈಲಾದಷ್ಟು ಹಣಕಾಸು ನೆರವು ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.

Rain Red Alert in 8 Districts Of North Karnataka

ಜಲ ಪ್ರಳಯ ಹಿನ್ನೆಲೆಯಲ್ಲಿ ಇಂದು ಕೂಡ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಹಾವೇರಿ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ರಣ ಮಳೆ ರೌದ್ರಸ್ವರೂಪ ತಾಳಿದ್ದು, ಈ ಜಿಲ್ಲೆಗಳಲ್ಲಿ ಶನಿವಾರದವರೆಗೂ ರೆಡ್ ಅಲರ್ಟ್ ವಿಸ್ತರಿಸಲಾಗಿದೆ.

English summary
North Karnataka Floods: Rain Red Alert in 8 Districts Of North Karnataka, The Meteorological office on Friday declared a red alert in 8 Districts .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X