ಉತ್ತರ ಕರ್ನಾಟಕಕ್ಕೆ ರೆಡ್ ಅಲರ್ಟ್: ಕರಾವಳಿ, ಮಲೆನಾಡಲ್ಲೂ ಮಳೆ

ಬೆಂಗಳೂರು, ಅಕ್ಟೋಬರ್ 14: ಉತ್ತರ ಆಂಧ್ರಪ್ರದೇಶದ ಕರಾವಳಿಯಲ್ಲಿ ಗಾಳಿಯ ತೀವ್ರತೆ ಹೆಚ್ಚಾಗಿರುವ ಕಾರಣ ಅ.14 ಮತ್ತು 15 ರಂದು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿಯಲಿದೆ.

ಹೀಗಾಗಿ ಬಾಗಲಕೋಟೆ, ಬೆಳಗಾವಿ, ಬೀದರ್,ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅ.14 ಮತ್ತು 15 ರಂದು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನೆರೆಡು ದಿನ ರಾಜ್ಯದ ದಕ್ಷಿಣ ಭಾಗ, ಮುಂದಿನ ನಾಲ್ಕು ದಿನ ಕರಾವಳಿ ಹಾಗೂ ಉತ್ತರ ಕರ್ನಾಟಕದ ಭಾಗದಲ್ಲಿ ಚಳಿ ಹಂತ ಹಂತವಾಗಿ ಕಡಿಮೆಯಾಗಿ ಬಿಸಿಲಿನ ವಾತಾವರಣ ಕಂಡುಬರಲಿದೆ. ಅಂದರೆ ಮುಂದಿನ ಒಂದು ವಾರ ಈಗಿರುವ ವಾತಾವರಣವೇ ಮುಂದುವರೆಯಲಿದೆ.

ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ

ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ

ಮಂಗಳವಾರ ಬೆಳಗ್ಗೆ 8.30ಕ್ಕೆ ಕೊರೊನಾ ಗೊಂಡಂತೆ ಕಳೆದ 24 ಗಂಟೆಯಲ್ಲಿ ರಾಜ್ಯದ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಅತಿ ಹೆಚ್ಚು 10 ಸೆಂ.ಮೀ ಮಳೆಯಾಗಿದೆ.
ಉಳಿದಂತೆ ಬಾಗಲಕೋಟೆಯ ಬಾದಾಮಿ8, ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಕೊಪ್ಪಳದ ಕುಷ್ಟಗಿ, ಆಗುಂಬೆ, ಬಳ್ಳಾರಿಯ ಹಗರಿಬೊಮ್ಮನಹಳ್ಳಿ ತಲಾ 7 ಸೆಂ.ಮೀ ಮಳೆಯಾಗಿದೆ.

ಎಲ್ಲೆಲ್ಲಿ ರೆಡ್ ಅಲರ್ಟ್

ಎಲ್ಲೆಲ್ಲಿ ರೆಡ್ ಅಲರ್ಟ್

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮಳೆ ಜತೆ ಚಳಿಯೂ ಜೋರು

ಮಳೆ ಜತೆ ಚಳಿಯೂ ಜೋರು

ರಾಜ್ಯದಲ್ಲಿ ಮಂಗಳವಾರ ತಾಪಮಾನ ಗರಿಷ್ಠ 30.4 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ಹಾಗೂ ಕನಿಷ್ಠ 18.6 ಡಿಗ್ರಿ ಸೆಲ್ಸಿಯಸ್ ಬೀದರ್‌ನಲ್ಲಿ ದಾಖಲಾಗಿತ್ತು. ಕಳೆದ ಮೂರ್ನಾಲ್ಕು ವರ್ಷದಂತೆ ಈ ಬಾರಿಯೂ ರಾಜ್ಯದಲ್ಲಿ ಅ.15ರ ನಂತರ ಮುಂಗಾರು ಅಂತ್ಯಗೊಂಡು ಹಿಂಗಾರು ಪ್ರವೇಶಿಸಲಿದೆ. ಈ ವೇಳೆ ಗಾಳಿ ಬಂಗಾಳಕೊಲ್ಲಿಯಿಂದ ತಮಿಳುನಾಡು ಮಾರ್ಗವಾಗಿ ರಾಜ್ಯದ ದಕ್ಷಿಣ ಒಳನಾಡನ್ನು ಪ್ರವೇಶಿಸುತ್ತದೆ. ಹೀಗಾಗಿ ತಮಿಳುನಾಡಿನಲ್ಲಿ ಹಿಂಗಾರಿನ ಪ್ರಭಾವ ಶೇ.40ರಷ್ಟಿದ್ದರೆ , ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶೇ.25ರಷ್ಟಿದೆ.

Recommended Video

    ಲಡಾಖ್, ಅರುಣಾಚಲ ಪ್ರದೇಶ ಚೀನಾದಂತೆ: ಹೊಸ ಕ್ಯಾತೆ..! | Oneindia Kannada
    ರಾಜ್ಯದಲ್ಲಿ ಶೇ.27ರಷ್ಟು ಹೆಚ್ಚು ಮಳೆ

    ರಾಜ್ಯದಲ್ಲಿ ಶೇ.27ರಷ್ಟು ಹೆಚ್ಚು ಮಳೆ

    ಪ್ರಸ್ತುತ ಮುಂಗಾರು ಅವಧಿಯಲ್ಲಿ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಒಟ್ಟಾರೆ ವಾಡಿಕೆಗಿಂತ ಶೇ.27ರಷ್ಟು ಹೆಚ್ಚು ಮಳೆಯಾಘಿರುವ ಪರಿಣಾಮ ಎಲ್ಲಾ ಭಾಗಗಳಲ್ಲಿ ವಾತಾವರಣ ತುಸು ಹೆಚ್ಚೇ ತಂಪಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+