ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ 4 ಜಿಲ್ಲೆಗಳಲ್ಲಿ 2 ದಿನ ಮಳೆಯ ರೆಡ್ ಅಲರ್ಟ್ ಘೋಷಣೆ

|
Google Oneindia Kannada News

ಬೆಂಗಳೂರು, ಆಗಸ್ಟ್ 08: ಮುಂದಿನ ಎರಡು ದಿನಗಳ ಕಾಲ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆ ಸುರಿಯುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

Recommended Video

ಕೆಆರ್ ಎಸ್ ಡ್ಯಾಂ ತುಂಬಲು 11 ಅಡಿ ಬಾಕಿ | Oneindia Kannada

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಟ್ಟಾರೆ ಮಳೆ ಪ್ರಮಾಣ ತಗ್ಗಿ ಅಲ್ಲಲ್ಲಿ ಭಾರಿ ಪ್ರಮಾಣದ ಮಳೆ ಬೀಳುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದಾದ್ಯಂತ ಆಗಸ್ಟ್ 16ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ. ಈಗಾಗಲೇ ಕೊಡಗು ಹಾಗೂ ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮನೆಗಳಿಗೆ ನೀರು ನುಗ್ಗಿದ್ದು, ಅಲ್ಲಲ್ಲಿ ಭೂಕುಸಿತ ಉಂಟಾಗಿದೆ.

rain

ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ರಾಜ್ಯದಲ್ಲಿ ಮತ್ತೆ ಜಲಸಂಕಷ್ಟ ಎದುರಾಗಿದೆ. ಮಲೆನಾಡಲ್ಲಿ ಸತತ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಮುಂದುವರೆದಿದ್ದರೆ, ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿರುವ ಕಾರಣ ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಹಲವೆಡೆ ಪ್ರಮುಖ ನದಿಗಳು ಉಕ್ಕಿ ಹರಿದಿವೆ.

ಧಾರವಾಡದಲ್ಲೂ ಮಳೆ ಆರ್ಭಟ; ನೀರಿನಲ್ಲಿ ಕೊಚ್ಚಿ ಹೋದ ಬಾಲಕಿಧಾರವಾಡದಲ್ಲೂ ಮಳೆ ಆರ್ಭಟ; ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ

ಚಿಕ್ಕಮಗಳೂರಿನ ಜಿಲ್ಲೆಯ ಮೂಡಿಗೆರೆ ಮತ್ತು ಶೃಂಗೇರಿ ಭಾಗಗಳಲ್ಲಿ ತುಂಗಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿರುವುರಿಂದ ಶೃಂಗೇರಿ ಪಟ್ಟಣದ ಮಾರುಕಟ್ಟೆಗೆ ನೀರು ನುಗ್ಗಿದೆ.

ರಾಜ್ಯದ 11 ಮಳೆ ಪೀಡಿತ ಜಿಲ್ಲೆಗಳಲ್ಲಿ ತುರ್ತು ಪರಿಹಾರ ಕಾರ್ಯಗಳಿಗೆ ತಲಾ 5 ಕೋಟಿ ವಿಕೋಪ ಪರಿಹಾರ ಅನುದಾನವನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಲಾಗಿದೆ.
ಕರಾವಳಿ, ಮಲೆನಾಡು, ಮೈಸೂರು ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮಳೆಯಾರ್ಭಟಕ್ಕೆ ಹಲವು ಜಿಲ್ಲೆಗಳ ವಿವಿಧ ದೇಗುಲಗಳು ದಿಗ್ಬಂಧನವಾಗಿವೆ.

ಕೊಡಗಿನ ಭಾಗಮಂಡಲದ ಭಗಂಡೇಶ್ವರ, ಬಾಡಗರಕೇರಿ ಮೃತ್ಯುಂಜಯ, ಕುಶಾಲನಗರ ಅಯ್ಯಪ್ಪ ದೇವಾಲಯ, ಚಿಕ್ಕಮಗಳೂರಿನ ಶೃಂಗೇರಿಯ ಶಾರದಾಂಬೆ ಹೀಗೆ ಅನೇಕ ದೇವಾಲಯಗಳು ಜಲಾವೃತವಾಗಿವೆ.

English summary
Meteorological Department Predicted that 2 days heavy rainfall over 4 districts of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X