India
 • search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಗಾರು ಚುರುಕು: ಕರ್ನಾಟಕದಲ್ಲಿ ಜೂನ್ 25ರವರೆಗೂ ಮಳೆರಾಯನದ್ದೇ ಆಟ

|
Google Oneindia Kannada News

ಬೆಂಗಳೂರು, ಜೂನ್ 22: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಮಂಗಳವಾರ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗಿದೆ.

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜೂನ್ 25ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಪ್ರತಿ ಗಂಟೆಗೆ 45 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಭಾರಿ ಮಳೆ ಸಾಧ್ಯತೆ: ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆಭಾರಿ ಮಳೆ ಸಾಧ್ಯತೆ: ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿತು. ಎರಡು ಗಂಟೆಗಳ ಕಾಲ ನಿರಂತರವಾಗಿ ಸುರಿದ ಮಳೆಗೆ ನಗರದ ರಸ್ತೆಗಳೆಲ್ಲ ಜಲಾವೃತಗೊಂಡಿದ್ದವು. ಮಂಗಳೂರು ನಗರದ ಗಲ್ಲಿಗಲ್ಲಿಗಳಿಗೆ ನೀರು ನುಗ್ಗಿದ್ದು, ಸಾರ್ವಜನಿಕರು ಪರದಾಡುವಂತಾ ಪರಿಸ್ಥಿತಿ ನಿರ್ಮಾಣವಾಯಿತು.

ಉಡುಪಿಯಲ್ಲಿ ಎರಡು ದಿನದಿಂದ ಮಳೆ: ಕಳೆದ ಎರಡು ದಿನಗಳಿಂದ ಉಡುಪಿ ನಗರದಲ್ಲಿ ಬಿರುಸಿನ ಮಳೆ ಆಗುತ್ತಿದೆ. ಮುಂಗಾರು ಚುರುಕುಗೊಂಡಿದ್ದು, ಪ್ರತಿನಿತ್ಯ ಸುರಿಯುವ ಮಳೆಯಿಂದ ಕರಾವಳಿಯಲ್ಲಿ ವಾತಾವರಣ ಕೂಲ್ ಕೂಲ್ ಆಗಿದೆ.

ಮಡಿಕೇರಿಯಲ್ಲಿ ಮಳೆಯ ಆಟ: ಕೊಡಗು ಜಿಲ್ಲೆಯಲ್ಲಿ ಮಳೆರಾಯ ಆಟ ಶುರುವಾಗಿದೆ. ಕೊಡಗು ಜಿಲ್ಲಾ ಕೇಂದ್ರದಲ್ಲಿ ಚುರುಕಿನ ಮಳೆಯಾಗಿದೆ. ಇದರ ಹೊರತಾಗಿ ಶನಿವಾರಸಂತೆ, ಸಿದ್ದಾಪುರ, ಸೋಮವಾರಪೇಟೆ, ಸುಂಟಿಕೊಪ್ಪ, ಗೋಣಿಕೊಪ್ಪಲು ಪ್ರದೇಶಗಳಲ್ಲಿ ತುಂತುರು ಮಳೆ ಸುರಿದಿದೆ. ಮೈಸೂರಿನಲ್ಲೂ ಕೆಲಹೊತ್ತು ಮಳೆ ಸುರಿದಿದೆ.

ಕಾರವಾರದಲ್ಲೂ ಮಳೆ ಅಬ್ಬರ: ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆರಾಯ ಆರ್ಭಟ ಜೋರಾಗಿದೆ. ಕಾರವಾರದಲ್ಲಿ ಎರಡು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದ್ದು, ನಗರದ ರಸ್ತೆಗಳು ಹೊಳೆಗಳಂತಾಗಿವೆ. ರವೀಂದ್ರನಾಥ್ ಟ್ಯಾಗೋರ್ ಕಡಲತೀರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅರ್ಧ ಕಿಲೋ ಮೀಟರ್ ವರೆಗೂ ನೀರು ನಿಂತುಕೊಂಡಿದೆ. ಜಿಲ್ಲೆಯ ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳದಲ್ಲೂ ಮಳೆ ಜೋರಾಗಿದೆ. ಅರೆ ಮಲೆನಾಡು ಎನಿಸಿರುವ ಹಳಿಯಾಳ ಮತ್ತು ಮುಂಡಗೋಡದಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿಗೆ ಅನುಕೂಲವಾಗಿದೆ.

ಬೆಳಗಾವಿಯಲ್ಲಿ ಮಳೆ: ಬೆಳಗಾವಿ ನಗರದಲ್ಲಿ ಸಾಧಾರಣ ಮಳೆಯಾಗುತ್ತಿದೆ. ಇದರ ಜೊತೆಗೆ ಜಿಲ್ಲೆಯ ಹಿಡಕಲ್ ಡ್ಯಾಮ್, ಖಾನಾಪುರ್, ಕಿತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ಹುಬ್ಬಳ್ಳಿಯಲ್ಲೂ ಕೆಲಕಾಲ ಮಳೆ ಸುರಿದಿರುವ ಬಗ್ಗೆ ವರದಿಯಾಗಿದೆ.

ಗದಗ ಜಿಲ್ಲೆಯಲ್ಲಿ ಬಿರುಸಿನ ಮಳೆ: ಗದಗ ಜಿಲ್ಲೆಯ ಮುಂಡರಗಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿರುಸಿನ ಮಳೆಯಾಗಿದೆ. ಹೊಸಪೇಟೆ ಮತ್ತು ಲಕ್ಷ್ಮೇಶ್ವರ ತಾಲೂಕಿನ ಹಲವೆಡೆ ಮುಂಗಾರು ಚುರುಕುಗೊಂಡಿದೆ.

ಕೊಡಗಿನಲ್ಲಿ ಮಳೆರಾಯ ಆಟ

ಕೊಡಗಿನಲ್ಲಿ ಮಳೆರಾಯ ಆಟ

ಕೊಡಗು ಜಿಲ್ಲೆಯಲ್ಲಿ ಮಳೆರಾಯ ಆಟ ಶುರುವಾಗಿದೆ. ಕೊಡಗು ಜಿಲ್ಲಾಕೇಂದ್ರದಲ್ಲಿ ಚುರುಕಿನ ಮಳೆಯಾಗಿದೆ. ಇದರ ಹೊರತಾಗಿ ಶನಿವಾರಸಂತೆ, ಸಿದ್ದಾಪುರ, ಸೋಮವಾರಪೇಟೆ, ಸುಂಟಿಕೊಪ್ಪ, ಗೋಣಿಕೊಪ್ಪಲು ಪ್ರದೇಶಗಳಲ್ಲಿ ತುಂತುರು ಮಳೆ ಸುರಿದಿದೆ. ಮೈಸೂರಿನಲ್ಲೂ ಕೆಲಹೊತ್ತು ಮಳೆ ಸುರಿದಿದೆ.

ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಮಳೆ

ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಮಳೆ

ಕಾರವಾರದಲ್ಲೂ ಮಳೆ ಅಬ್ಬರ: ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆರಾಯ ಆರ್ಭಟ ಜೋರಾಗಿದೆ. ಕಾರವಾರದಲ್ಲಿ ಎರಡು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದ್ದು, ನಗರದ ರಸ್ತೆಗಳು ಹೊಳೆಗಳಂತಾಗಿವೆ. ರವೀಂದ್ರನಾಥ್ ಟ್ಯಾಗೋರ್ ಕಡಲತೀರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅರ್ಧ ಕಿಲೋ ಮೀಟರ್ ವರೆಗೂ ನೀರು ನಿಂತುಕೊಂಡಿದೆ. ಜಿಲ್ಲೆಯ ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳದಲ್ಲೂ ಮಳೆ ಜೋರಾಗಿದೆ.

ಅರೆ ಮಲೆನಾಡು ಎನಿಸಿರುವ ಹಳಿಯಾಳ ಮತ್ತು ಮುಂಡಗೋಡದಲ್ಲಿ ಉತ್ತಮ ಮಳೆಯಾಗಿದ್ದು, ಕೃಷಿಗೆ ಅನುಕೂಲವಾಗಿದೆ.

ಉತ್ತರ ಕರ್ನಾಟಕದಲ್ಲೂ ಮುಂಗಾರು ಚುರುಕು

ಉತ್ತರ ಕರ್ನಾಟಕದಲ್ಲೂ ಮುಂಗಾರು ಚುರುಕು

ಬೆಳಗಾವಿಯಲ್ಲಿ ಮಳೆ: ಬೆಳಗಾವಿ ನಗರದಲ್ಲಿ ಸಾಧಾರಣ ಮಳೆಯಾಗುತ್ತಿದೆ. ಇದರ ಜೊತೆಗೆ ಜಿಲ್ಲೆಯ ಹಿಡಕಲ್ ಡ್ಯಾಮ್, ಖಾನಾಪುರ್, ಕಿತ್ತೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ಹುಬ್ಬಳ್ಳಿಯಲ್ಲೂ ಕೆಲಕಾಲ ಮಳೆ ಸುರಿದಿರುವ ಬಗ್ಗೆ ವರದಿಯಾಗಿದೆ.

ಗದಗ ಜಿಲ್ಲೆಯಲ್ಲಿ ಬಿರುಸಿನ ಮಳೆ: ಗದಗ ಜಿಲ್ಲೆಯ ಮುಂಡರಗಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿರುಸಿನ ಮಳೆಯಾಗಿದೆ. ಹೊಸಪೇಟೆ ಮತ್ತು ಲಕ್ಷ್ಮೇಶ್ವರ ತಾಲೂಕಿನ ಹಲವೆಡೆ ಮುಂಗಾರು ಚುರುಕುಗೊಂಡಿದೆ.

ಅಕ್ಕಪಕ್ಕದ ರಾಜ್ಯಗಳಲ್ಲೂ ಭಾರೀ ಮಳೆ

ಅಕ್ಕಪಕ್ಕದ ರಾಜ್ಯಗಳಲ್ಲೂ ಭಾರೀ ಮಳೆ

ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳವರೆಗೂ ಮುಂಗಾರು ಚುರುಕುಗೊಳ್ಳಲಿದೆ. ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆಯಾಗವು ಮುನ್ಸೂಚನೆ ಸಿಕ್ಕಿದೆ. ಅದೇ ರೀತಿ ಕರ್ನಾಟಕದ ಕರಾವಳಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಇದರ ಜೊತೆಗೆ ಅಕ್ಕಪಕ್ಕದ ರಾಜ್ಯಗಳಾದ ಗೋವಾ, ಮಹಾರಾಷ್ಟ್ರ ಮತ್ತು ಕೇರಳ ಕರಾವಳಿಯಲ್ಲಿ ಭಾರೀ ಮಳೆ ಆಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.

   Virat Kohli ಗೆ Covid Positive: BCCI ಮಾಡಿದ್ದೇನು? ನೆಕ್ಸ್ಟ್ ಮ್ಯಾಚ್ ಕಥೆ ಏನು? | *Cricket | OneIndia

   English summary
   Rain thundershowers very likely to occur at isolated places over the Karnataka till June 25th. Know More.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X