• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದ ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

|

ಬೆಂಗಳೂರು, ಮಾರ್ಚ್ 11: ಕರ್ನಾಟಕದ ಕರಾವಳಿ ಸೇರಿದಂತೆ 6 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದ್ದು, ಉತ್ತರ ಕನ್ನಡದಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಮುಂದಿನ 24 ಗಂಟೆಯೊಳಗಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಮುಂದಿನ ವಾರದಿಂದ ಹಂತ ಹಂತವಾಗಿ ಬಿಸಿಲಿನ ಝಳ ಹೆಚ್ಚಳರಾಜ್ಯದಲ್ಲಿ ಮುಂದಿನ ವಾರದಿಂದ ಹಂತ ಹಂತವಾಗಿ ಬಿಸಿಲಿನ ಝಳ ಹೆಚ್ಚಳ

ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಮುನ್ಸೂಚನೆಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಮುನ್ಸೂಚನೆ

ದೆಹಲಿ, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಕೇರಳದಲ್ಲಿ ಮಳೆಯಾಗುತ್ತಿದೆ. ಉತ್ತರಾಖಂಡ್ ಹಾಗೂ ಹಿಮಾಚಲದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಮಳೆ

ದಕ್ಷಿಣ ಒಳನಾಡಿನಲ್ಲಿ ಮಳೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿಯೂ ಒಣಹವೆ ಮುಂದುವರೆಯಲಿದೆ. ಆದರೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಾತ್ರ ಮಳೆಯಾಗಲಿದೆ.

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, ಬೆಂಗಳೂರು ನಗರದಲ್ಲಿ ಗರಿಷ್ಠ 33.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 33.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಕೆ

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಕೆ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

    Ramesh Jarkiholi ಏನು ಅಂಥ ನನಿಗೆ ಚೆನ್ನಾಗೇ ಗೊತ್ತು?? | D K Shivakumar | Oneindia Kannada
    ಅತಿ ಹೆಚ್ಚು, ಅತಿ ಕಡಿಮೆ ಉಷ್ಣಾಂಶ ಎಲ್ಲಿ ದಾಖಲಾಗಿದೆ?

    ಅತಿ ಹೆಚ್ಚು, ಅತಿ ಕಡಿಮೆ ಉಷ್ಣಾಂಶ ಎಲ್ಲಿ ದಾಖಲಾಗಿದೆ?

    ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ದಾವಣಗೆರೆಯಲ್ಲಿ 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    English summary
    Rain,thundershowers very likely to occur over Coastal Karnataka and South Interior Karnataka . Dry weather very likely to prevail over North Interior Karnataka.
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X