ಕರ್ನಾಟಕ; 13 ಜಿಲ್ಲೆಯಲ್ಲಿ ಯೆಲ್ಲೊ ಅಲರ್ಟ್‌, ಬೆಂಗಳೂರಲ್ಲೂ ಮಳೆ

ಬೆಂಗಳೂರು, ನವೆಂಬರ್ 09; ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ 13 ಜಿಲ್ಲೆಗಳಲ್ಲಿ ಮಂಗಳವಾರ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ನವೆಂಬರ್ 11ರ ಬಳಿಕ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ ಇದೆ. ವಾಯುಭಾರ ಕುಸಿತದ ಪರಿಣಾಮ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ.

ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯಭಾರ ಕುಸಿತದ ಪರಿಣಾಮ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ನವೆಂಬರ್ 11ರ ತನಕ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಂಗಳೂರು ನಗರದಲ್ಲಿ ಸೋಮವಾರ ತಾಪಮಾನ ಕುಸಿತವಾಗಿದ್ದು ಚಳಿಯ ವಾತಾವರಣವಿತ್ತು. ದಿನವಿಡೀ ಮೋಡ ಕವಿದ ವಾತಾವರಣವಿದ್ದು, ಸಂಜೆ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿತ್ತು. ಮಂಗಳವಾರ ಸಂಜೆ ವೇಳೆಗೆ ನಗರದಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಇನ್ನೂ 2 ದಿನ ಬೆಂಗಳೂರು ನಗರದಲ್ಲಿ ಇಂತಹ ವಾತಾವರಣ ಮುಂದುವರೆಯಲಿದೆ.

ಕರ್ನಾಟಕದ ಮಾತ್ರವಲ್ಲ ವಿವಿಧ ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿ ಬುಧವಾರದಿಂದ ಶುಕ್ರವಾರದ ತನಕ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಬುಧವಾರ ಮತ್ತು ಗುರುವಾರ ಆಂಧ್ರ ಪ್ರದೇಶದಲ್ಲಿ, ಗುರುವಾರ ಕೇರಳದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ವಿವಿಧ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್

ವಿವಿಧ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್

ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಮಳೆಯಾಗುತ್ತಿದೆ. ಮಂಗಳವಾರ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.

ಕರಾವಳಿಯಲ್ಲಿ ಮತ್ತೆ ಮಳೆ

ಕರಾವಳಿಯಲ್ಲಿ ಮತ್ತೆ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಮುನ್ಸೂಚನೆ ಇದೆ. ಇದರಿಂದಾಗಿ ತಮಿಳುನಾಡು, ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 11ರ ಬಳಿಕವೂ ಮಳೆ ಮುಂದುವರೆಯಲಿದೆ ಎಂದು ಅಂದಾಜಿಸಲಾಗಿದೆ. ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಈಗಿರುವ ಪರಿಸ್ಥಿತಿಯೇ ಮುಂದುವರೆಯಲಿದೆ. ಉತ್ತರ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ ಸಾಧಾರಣ ಮಳೆಯಾಗಬಹುದು.

ನವೆಂಬರ್ 11ರಂದು ಯೆಲ್ಲೋ ಅಲರ್ಟ್

ನವೆಂಬರ್ 11ರಂದು ಯೆಲ್ಲೋ ಅಲರ್ಟ್

ಭಾರತೀಯ ಹವಾಮಾನ ಇಲಾಖೆ ನವೆಂಬರ್ 11ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ.

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಡ್ಯಾಂಗಳಲ್ಲಿ ಒಳಹರಿವಿನಲ್ಲಿಯೂ ಏರಿಕೆಯಾಗಿದೆ. ಕೆಆರ್‌ಎಸ್‌ಗೆ 10,570 ಕ್ಯುಸೆಕ್, ತುಂಗಭದ್ರಾಕ್ಕೆ 11,445, ಭದ್ರಾಕ್ಕೆ 2,354, ಹೇಮಾವತಿಗೆ 3,602 ಕ್ಯುಸೆಕ್ ನೀರು ಹರಿದು ಬರುತ್ತಿದೆ.

Recommended Video

    ಸುಮಾರು 2 ವರ್ಷಗಳ ನಂತರ ಶಾಲೆಗೆ ಬಂದ ಮಕ್ಕಳು | Oneindia Kannada
    ವಿವಿಧ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ

    ವಿವಿಧ ರಾಜ್ಯಗಳಲ್ಲಿ ಮಳೆ ಮುನ್ಸೂಚನೆ

    ತಮಿಳುನಾಡು ರಾಜ್ಯದಲ್ಲಿಈಗಾಗಲೇ ಭಾರೀ ಮಳೆಯಾಗುತ್ತಿದೆ. ಶುಕ್ರವಾರದ ತನಕ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಆರೆಂಕ್ ಅಲರ್ಟ್ ಘೋಷಿಸಿದೆ.

    ಕೇರಳ, ಅಂಡಮಾನ್ ಮತ್ತು ನಿಕೋಬಾರ್, ಆಂಧ್ರ ಪ್ರದೇಶ, ಲಕ್ಷದ್ವೀಪ, ಮಹಾರಾಷ್ಟ್ರದ ಕರಾವಳಿ, ಗೋವಾದಲ್ಲಿಯೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

    ಮಂಗಳವಾರ ತಮಿಳುನಾಡು, ಪುದುಚೇರಿ, ಕಾರೈಕಲ್, ಆಂಧ್ರ ಪ್ರದೇಶದ ದಕ್ಷಿಣ ಭಾಗ, ಕೇರಳ, ಮಾಹೆಯಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಆಂಧ್ರ ಪ್ರದೇಶದ ಕರಾವಳಿ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಪುದುಚೇರಿ, ಮಾಹೆ ಕೇರಳದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+