ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ
ಬೆಂಗಳೂರು, ಆಗಸ್ಟ್.20: ಕರ್ನಾಟಕದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.
Recommended Video
ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡ ಜಿಲ್ಲೆಯಗಳಲ್ಲಿ ಆಗಸ್ಟ್.20 ಮತ್ತು ಆಗಸ್ಟ್.21ರಂದು ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯ ಕರಾವಳಿ ಪ್ರದೇಶದ ಜಿಲ್ಲೆಗಳಲ್ಲಿ ಸಂಪೂರ್ಣವಾಗಿ ಮೋಡ ಕವಿದ ವಾತಾವರಣವಿದೆ. ಈ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾವ ಶೇ.27ರಷ್ಟಿದೆ. ಕನಿಷ್ಠ ತಾಪಮಾನ ಶೇ.20ರಷ್ಟಿದ್ದು, ಚಳಿಯ ವಾತಾವರಣ ನಿರ್ಮಾಣವಾಗಿದೆ.

ಕರಾವಳಿಯಲ್ಲಿ ಬಿದ್ದ ಮಳೆಯ ಪ್ರಮಾಣ:
ಕಳೆದ 24 ಗಂಟೆಗಳಲ್ಲಿ ಆಗುಂಬೆ 12 ಸೆಂಟಿ ಮೀಟರ್ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಮಾಣಿ ಪ್ರದೇಶಗಳಲ್ಲಿ 7 ಸೆಂಟಿ ಮೀಟರ್ ಮಳೆಯಾಗಿದ್ದರೆ, ಮೂಡಬಿದರೆ, ಉಡುಪಿ ಜಿಲ್ಲೆಯ ಕಾರ್ಕಳ, ಕೊಲ್ಲೂರು, ಸಿದ್ದಾಪುರದಲ್ಲಿ 6 ಸೆಂಟಿ ಮೀಟರ್ ಮಳೆಯಾಗಿದೆ. ಇನ್ನು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಬೆಳ್ತಂಗಡಿ, ಪುತ್ತೂರು, ಧರ್ಮಸ್ಥಳ, ಉತ್ತರ ಕನ್ನಡ ಜಿಲ್ಲೆಯ ಕದ್ರಾದಲ್ಲಿ 5 ಸೆಂಟಿ ಮೀಟರ್ ನಷ್ಟು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications