ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೂ ಐದು ದಿನ ಮಳೆಯೋ ಮಳೆ!
ಬೆಂಗಳೂರು, ಆಗಸ್ಟ್.10: ರಾಜ್ಯದಲ್ಲಿ ಮುಂದಿನ ಐದು ದಿನ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.
Recommended Video
ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮವಾಗಿ ರಾಜ್ಯದಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ರಾಜ್ಯ ಕರಾವಳಿ, ದಕ್ಷಿಣ ಒಳನಾಡು, ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನಗಳ ಕಾಲ ಅತಿಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ.
ಸೋಮವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್:
ಚಾಮರಾಜನಗರ, ಚಿತ್ರದುರ್ಗ, ಮೈಸೂರು, ತುಮಕೂರು, ಬೀದರ್, ಕಲಬುರಗಿ, ರಾಯಚೂರು, ಮತ್ತು ಯಾದಗಿರಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಸೋಮವಾರ ಸಾಧಾರಣ ಮಳೆ ಬೀಳುವ ಸಾಧ್ಯತೆಗಳಿವೆ.
ಆಗಸ್ಟ್.11ರ ಬಳಿಕ ಮಳೆ ಪ್ರಮಾಣವು ಕಡಿಮೆಯಾಗಲಿದ್ದು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣೆ ಮಳೆ ಇರಲಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.












Click it and Unblock the Notifications