ಕರ್ನಾಟಕದಲ್ಲಿ ಆಗಸ್ಟ್.14ರವರೆಗೂ ಧಾರಾಕಾರ ಮಳೆ
ಬೆಂಗಳೂರು, ಆಗಸ್ಟ್ 11: ಈಗಾಗಲೇ ವರುಣನ ಅಟ್ಟಹಾಸಕ್ಕೆ ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಜನರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಆಗಸ್ಟ್.14ರವರೆಗೂ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.
ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಈ ಹಿನ್ನೆಲೆ ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ರಾಜ್ಯ ಕರಾವಳಿ, ದಕ್ಷಿಣ ಒಳನಾಡು, ಹಾಗೂ ಉತ್ತರ ಒಳನಾಡಿನಲ್ಲಿ ಆಗಸ್ಟ್.14ರವರೆಗೂ ಅತಿಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ.
7 ತಾಸು ಮಳೆಯಲ್ಲಿ ನಿಂತು ವಾಹನ ಸವಾರರಿಗೆ ಸಹಾಯ ಮಾಡಿದ ಮಹಿಳೆ ಇವರೇ ನೋಡಿ
ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನದಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಚಾಮರಾಜನಗರ, ಚಿತ್ರದುರ್ಗ, ಮೈಸೂರು, ತುಮಕೂರು, ಬೀದರ್, ಕಲಬುರಗಿ, ರಾಯಚೂರು, ಮತ್ತು ಯಾದಗಿರಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಸೋಮವಾರ ಸಾಧಾರಣ ಮಳೆ ಬೀಳುವ ಸಾಧ್ಯತೆಗಳಿವೆ. ಆಗಸ್ಟ್.11ರ ಬಳಿಕ ಮಳೆ ಪ್ರಮಾಣವು ಕಡಿಮೆಯಾಗಲಿದ್ದು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣೆ ಮಳೆ ಇರಲಿದೆ ಎಂದು ಹವಾಮಾನ ಇಲಾಖೆಯು ಎಚ್ಚರಿಕೆ ನೀಡಿದೆ.