Heavy Rain: ರಾಜ್ಯದಲ್ಲಿ ಮುಂದುವರೆದ ಮಳೆರಾಯನ ಆರ್ಭಟ: ಈ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು, ಜುಲೈ 13: ರಾಜ್ಯದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಉತ್ತರ ಕನ್ನಡ ಜಿಲ್ಲೆಗೆ ಇಂದಿನಿಂದ 3 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ ವಾರಗಳ ಕಾಲ ಭರ್ಜರಿ ಮಳೆ ಮುಂದುವರೆಯುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಬಾರಿಗಿಂತ ಈ ಬಾರೀ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದೆ. ಕರಾವಳಿ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಕಾರವಾರ ಸೇರಿದಂತೆ ಮಲೆನಾಡಿನ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ. ಅಲ್ಲದೇ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Rain Will Continue In The State Red Alert For Uttara Kannada District

ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು ಇಂದಿನಿಂದ ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 13, 14 ಮತ್ತು 15 ರಂದು ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಹುತೇಕ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗಲಿದ್ದು 115mm ದಿಂದ 205 mm ವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಭರ್ಜರಿ ಮಳೆಯಾಗಿದ್ದು, ಹಲವು ಬಡಾವಣೆಗಳ ರಸ್ತೆಗಳೆಲ್ಲಾ ಜಲಾವೃತವಾಗಿ ಜನ ಪರದಾಡುವಂತಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸಂಜೆಗಳಿಗೆ ಒಂದಿಷ್ಟು ಹೊತ್ತು ಸುರಿದು ಬಂದ್‌ ಆಗುತ್ತಿದ್ದ ಮಳೆ ಶುಕ್ರವಾರ ಅಬ್ಬರ ಆರಂಭಿಸಿದೆ. ಸಂಜೆ ಎರಡು ಗಂಟೆಗಳ ಕಾಲ ಜೋರು ಮಳೆಯಾಗಿದೆ. ಬೆಂಗಳೂರು ನಗರದಲ್ಲಿ ಜುಲೈ 12 ರಿಂದ ಮುಂದಿನ 5 ದಿನಗಳವರೆಗೆ ಮಳೆಯಾಗಲಿದೆ ಎಂದು ರಾಜ್ಯದ ಹವಾಮಾನ ಮುನ್ಸೂಚನೆ ನೀಡಿದೆ. ಆದರೆ, ಯೆಲ್ಲೋ ಆರೆಂಜ್‌ನಂತಹ ಅಲರ್ಟ್‌ ನೀಡಿಲ್ಲ. ಸಾಧಾರಣದಿಂದ ಉತ್ತಮ ಮಳೆಯಾಗಲಿದೆ ಎಂದು ತಿಳಿಸಿದೆ.

ಇನ್ನೂ ಕರಾವಳಿ ಜಿಲ್ಲೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮತ್ತಷ್ಟು ಮುಂದುವರೆಯಲಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಸುತ್ತಮುತ್ತಲಿನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗಾಳಿಯ ವೇಗವು ತಲುಪುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗಾ, ದಾವಣಗೆರೆ, ಹಾಸನ ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವೆಡೆ ಗಾಳಿಯ ವೇಗವು (30-40 kmph) ತಲುಪುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+