ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 10ರವರೆಗೆ ರಾಜ್ಯದಲ್ಲಿ ಮುಂದುವರೆಯಲಿದೆ ಮುಂಗಾರು ಪೂರ್ವ ಮಳೆ

|
Google Oneindia Kannada News

ಬೆಂಗಳೂರು, ಮೇ 06: ರಾಜ್ಯದಲ್ಲಿ ಮೇ 10ರವರೆಗೂ ಮುಂಗಾರುಪೂರ್ವ ಮಳೆ ಮುಂದುವರೆಯಲಿದೆ. ಪೂರ್ವ ಮುಂಗಾರು ಮಳೆಯ ಅಬ್ಬರ ಮಲೆನಾಡಿನಲ್ಲಿ ಕಳೆದ 10 ದಿನಗಳಿಂದ ನಿರಂತರವಾಗಿದ್ದು, ಬುಧವಾರ ಕೂಡ ಶಿವಮೊಗ್ಗದಲ್ಲಿ ಧಾರಾಕಾರ ಮಳೆ ಸುರಿದಿದೆ.

ಶಿವಮೊಗ್ಗ, ತೀರ್ಥಹಳ್ಳಿ, ಸಾಗರದ ಗ್ರಾಮೀಣ ಪ್ರದೇಶದಲ್ಲಿ ಗುಡುಗು, ಸಿಡಿಲು ಸಮೇತ ಮಳೆಯಾಗಿದೆ. ಈ ವರ್ಷ ಜನವರಿಯಲ್ಲೇ ಮಳೆ ಕಾಣಿಸಿಕೊಂಡಿತ್ತು, ಅಲ್ಲಿಂದ ಆಗಾಗ ಮಳೆ ಬರುತ್ತಿತ್ತು. ಈಗ ಮುಂಗಾರು ಪೂರ್ವ ಮಳೆ ಬೇಗನೇ ಭೂಮಿ ಹದಗೊಳಿಸಿದ್ದು, ರೈತರ ಮುಖದಲ್ಲಿ ನಗು ಮೂಡಿದೆ.

ಮುಂದಿನ 4 ದಿನ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಧಿಕ ಮಳೆಮುಂದಿನ 4 ದಿನ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಧಿಕ ಮಳೆ

ಕಲಬುರಗಿಯಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಮುಂದು ನಾಲ್ಕು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನಲ್ಲಿ ಅತ್ಯಧಿಕ ಮಳೆಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನಲ್ಲಿ ಅತ್ಯಧಿಕ ಮಳೆ

ಉತ್ತರ ಒಳನಾಡಿನಲ್ಲಿ ಮಳೆ

ಉತ್ತರ ಒಳನಾಡಿನಲ್ಲಿ ಮಳೆ

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.

Recommended Video

ದೆಹಲಿಯಲ್ಲಿ ಸೋಂಕಿತರಿಗಾಗಿ ಆಟೋ ಆಂಬ್ಯುಲೆನ್ಸ್‌ ಸೇವೆ.. | Oneindia Kannada
ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಬೀದರ್‌ನಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ, ಬೀದರ್, ಬಾಲ್ಕಿ, ಬಸವಕಲ್ಯಾಣ, ಹುಲಸೂರು ಮುಂತಾದ ಕಡೆಗಳಲ್ಲಿ ಮಳೆ ಸುರಿದಿದೆ, ನರಗುಂದ, ಕದ್ರ, ಹೊಸದುರ್ಗಾ, ಕಿರವತ್ತಿ, ಸಿದ್ದಾಪುರ, ಹರಪ್ಪನಹಳ್ಳಿ, ಧಾರವಾಡ, ಬಾಗಲಕೋಟೆ, ಬಾದಾಮಿ, ತಾಳಗುಪ್ಪ, ಬೈಲಹೊಂಗಲ, ಗೌರಿಬಿದನೂರು, ಬರ್ಗೂರಿನಲ್ಲಿ ಮಳೆಯಾಗಿದೆ.

English summary
Meteorological department predicted that rain will continue till May 10 in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X