ಕರ್ನಾಟಕ: ಮಾರ್ಚ್ 24ರವರೆಗೆ 8 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಬೆಂಗಳೂರು, ಮಾರ್ಚ್ 20: ಕರ್ನಾಟಕದ 8 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಾರ್ಚ್ 24ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡದ ಕೆಲವು ಭಾಗ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದ್ದು, 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಗರಿಷ್ಠ, ಕನಿಷ್ಠ ಉಷ್ಣಾಂಶವಿರುವ ಜಿಲ್ಲೆಗಳು
ಕಲಬುರಗಿಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ದಾವಣಗೆರೆಯಲ್ಲಿ 15.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ
ದಕ್ಷಿಣ ಕನ್ನಡ, ಉತ್ತರ ಕನ್ನಡದ ಕೆಲವು ಭಾಗ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಯ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ.

ತಾಪಮಾನ ಏರಿಕೆ
ಮಳೆಯ ಬಳಿಕ ಹಲವು ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆ ಉಂಟಾಗಲಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆ ನಂತರ ತಾಪಮಾನ ಎಂದಿನಂತೆ ಏರಲಿದೆ.
Recommended Video

ಬೆಂಗಳೂರು ಹವಾಮಾನ ಹೇಗಿದೆ?
ಬೆಂಗಳೂರಲ್ಲಿ ಶುಭ್ರ ಆಕಾಶವಿದೆ, ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications