karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ನ.22 ರವರೆಗೂ ಭಾರೀ ಮಳೆ; ಹವಾಮಾನ ಇಲಾಖೆ ಕೊಟ್ಟ ಸೂಚನೆ ಏನು?

ರಾಜ್ಯದಲ್ಲಿ ಮತ್ತೆ ಹಿಂಗಾರು ಚುರುಕುಗೊಂಡಿದ್ದು, ನವೆಂಬರ್‌ 23 ರಿಂದ ಮೂರು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಇದೀಗ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ನವೆಂಬರ್ 22ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ನವೆಂಬರ್‌ 22 ರವರೆಗೂ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

rain-will-occur-in-coastal-and-south-interior

ಇನ್ನೂ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ನವೆಂಬರ್ 23ರಿಂದ ದಕ್ಷಿಣ ಒಳನಾಡು ಜಿಲ್ಲೆಗಳಾದ ಕೊಡಗು, ಮೈಸೂರು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಆಗಲಿದೆ.

ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಸೇರಿದಂತೆ ವಿವಿಧೆಡೆ ಹಗುರದಿಂದ ಸಾಧಾರಣವಾಗಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಕರಾವಳಿ ಭಾಗದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನವೆಂಬರ್ 24ರಂದು ಒಂದು ದಿನ ಧಾರಾಕಾರ ಮಳೆ ಆಗುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+