Karnataka Rain: ವಾರಾಂತ್ಯದಲ್ಲಿ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು, ಡಿಸೆಂಬರ್ 15: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಚಳಿ ಜೋರಾಗಿದೆ. ವರ್ಷದ ಅಂತ್ಯದ ಸಮಯದಲ್ಲಿ ಚಳಿಗಾಲದ ತೀವ್ರತೆ ಹೆಚ್ಚಾಗುತ್ತಿದೆ. ಹವಾಮಾನ ಇಲಾಖೆ ವರದಿ ಪ್ರಕಾರ ಕರ್ನಾಟಕದ ದಕ್ಷಿಣ ಒಳನಾಡಿಗಿಂತಲೂ ಉತ್ತರ ಒಳನಾಡಿನಲ್ಲಿ ಅಂದರೆ ಉತ್ತರ ಕರ್ನಾಟಕದ ಭಾಗದಲ್ಲಿ ಚಳಿ ಪ್ರಮಾಣ ಹೆಚ್ಚಾಗಿದೆ.
ಕೊರೆಯುವ ಚಳಿಯ ನಡುವೆ ವಿರಾಮ ನೀಡಿದ್ದ ಮಳೆರಾಯ ರಾಜ್ಯದಲ್ಲಿ ಮತ್ತೆ ಆರ್ಭಟಿಸುವ ಸಾಧ್ಯತೆ ಇದೆ. ಕಳೆದು ಒಂದು ವಾರಗಳಿಂದ ಬಿಡುವು ನೀಡಿರುವ ಮಳೆ ಈ ವಾರಾಂತ್ಯದಲ್ಲಿ ಮತ್ತೆ ಆರಂಭವಾಗಲಿದೆ. ಡಿಸೆಂಬರ್ 17ರಿಂದ ಎರಡು ದಿನಗಳು ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ.

ಭಾನುವಾರದಿಂದ ಎರಡು ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮಂಡ್ಯ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಹಾವೇರಿ, ತುಮಕೂರು, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಉತ್ತರ ಒಳನಾಡಿನಲ್ಲಿ ಅಂದರೆ ಉತ್ತರ ಕರ್ನಾಟಕದ ಭಾಗದಲ್ಲಿ ಚಳಿ ಹೆಚ್ಚಾಗಲಿದ್ದು, ಡಿಸೆಂಬರ್ 17ರಿಂದ ಒಣಹವೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ಈ ಬಾರಿ ಕರಾವಳಿ ಮತ್ತು ದಕ್ಷಿಣದ ಭಾಗದ ಜಿಲ್ಲೆಗಳಿಗಿಂತಲೂ ಉತ್ತರ ಒಳನಾಡಿನಲ್ಲಿ ಚಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಹಾವೇರಿ, ಗದಗ, ಬೆಳಗಾವಿ ರಾಯಚೂರು, ಕೊಪ್ಪಳ, ಧಾರವಾಡ, ಬಾಗಲಕೋಟೆ ಹಾಗೂ ಬೀದರ್ ಜಿಲ್ಲೆಗಳಲ್ಲಿ ಅಧಿಕ ಚಳಿ ವರದಿ ಆಗುತ್ತಿದೆ. ಇನ್ನು ಈ ಭಾಗದಲ್ಲಿ ಕನಿಷ್ಠ ತಾಪಮಾನ 18-12 ಡಿಗ್ರಿ ಸೆಲ್ಸಿಯಸ್ ವರೆಗೆ ಅತ್ಯಧಿಕ ಪ್ರಮಾಣದಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.












Click it and Unblock the Notifications