ನವೆಂಬರ್ 25 ರಂದು ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು, ನವೆಂಬರ್ 20: ಹಿಂಗಾರು ಮಳೆ ಅಷ್ಟೊಂದು ಪ್ರಭಾವ ಬೀರದೆ ಹಿಂದೆ ಸರಿದಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.

ನವೆಂಬರ್ 25 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 48 ಗಂಟೆಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ನಿರೀಕ್ಷೆಗಳಿಲ್ಲ, ಒಣಹವೆ ಮುಂದುವರೆಯಲಿದೆ. ದಾವಣಗೆರೆಯಲ್ಲಿ ಅತಿ ಕಡಿಮೆ ಅಂದರೆ 12.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Rain Will Occure South Interior Karnataka On November 25

ಮಲೆನಾಡು, ಕರಾವಳಿ ಭಾಗದಲ್ಲಿ ಚಳಿ ಕೊಂಚ ಕಡಿಮೆಯೇ ಇದೆ, ನಗರ ಪ್ರದೇಶಗಳಲ್ಲಿ ಚಳಿ ಹೆಚ್ಚಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಲಿರುವ ವಾಯುಭಾರ ಕುಸಿತದ ಕಾರಣ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯ ಹಲವೆಡೆ ನವೆಂಬರ್ 25 ರಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Recommended Video

      Corona ಲಸಿಕೆ ಪೂರೈಸಲು ಮಾಸ್ಟರ್ ಪ್ಲಾನ್ ಮಾಡಿದ Modi | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+