ರಾಜ್ಯಾದ್ಯಂತ ಮಳೆ; ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ಕೊಟ್ಟ ಸಿಎಂ

ಬೆಂಗಳೂರು, ಆಗಸ್ಟ್ 06 : ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಲವು ಪ್ರದೇಶಗಳಲ್ಲಿ ಭೂ ಕುಸಿತವಾಗಿದೆ. ಜನರು ಆತಂಕಗೊಂಡಿದ್ದಾರೆ.

Recommended Video

      Rainfall in Karnataka. BS Yediyurappa ಮುಂಜಾಗ್ರತೆಗಾಗಿ 50 ಕೋಟಿ ಬಿಡುಗಡೆಗೆ

      ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಸ್ಪತ್ರೆಯಲ್ಲಿದ್ದಾರೆ. ಕೋವಿಡ್ ಸೋಂಕಿತರಾಗಿರುವ ಮುಖ್ಯಮಂತ್ರಿಗಳು ಜಿಲ್ಲೆಗಳ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.

      ಆಸ್ಪತ್ರೆಯಿಂದಲೇ ಅಧಿಕಾರಿಗಳಿಗೆ ಪರಿಸ್ಥಿತಿಯನ್ನು ನಿಭಾಯಿಸಲು ಬೇಕಾದ ಸಲಹೆಗಳನ್ನು ನೀಡುತ್ತಿದ್ದಾರೆ. ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ‌ಮುಖ್ಯಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಸೂಚನೆ ಕೊಟ್ಟಿದ್ದಾರೆ.

      Rain Yediyurappa Direction To District In Charge Ministers

      ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಈ ಕುರಿತು ಗುರುವಾರಟ ಟ್ವೀಟ್ ಮಾಡಿದ್ದಾರೆ. ಕ್ಷೇತ್ರ ಬಿಟ್ಟು ಹೋಗದೆ, ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಬೇಕು ಎಂದು ತಿಳಿಸಿದ್ದಾರೆ.

      ಪರಿಹಾರ ವಿತರಣೆ ಸೇರಿದಂತೆ ಇತರೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿರುವ ಅವರು, ಈಗಾಗಲೇ 50 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಅಗತ್ಯವಿದ್ದರೆ ಇನ್ನಷ್ಟು ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅತಿ ತುರ್ತು ಕೆಲಸಗಳಿಗೆ ಉಸ್ತುವಾರಿ ಸಚಿವರುಗಳೇ ತೀರ್ಮಾನ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+