ಕರ್ನಾಟಕದ 15 ಜಿಲ್ಲೆಗಳಲ್ಲಿ ಅ.26ರವರೆಗೂ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು, ಅಕ್ಟೋಬರ್ 23: ಕರ್ನಾಟಕದ 15 ಜಿಲ್ಲೆಗಳಲ್ಲಿ ಅಕ್ಟೋಬರ್ 26ರವರೆಗೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕರ್ನಾಟಕದಲ್ಲಿ ಚಿತ್ತಾ ಮಳೆಯ ಆರ್ಭಟಕ ಇಂದಿನಿಂದ ಕೊಂಚ ಕಡಿಮೆಯಾಗಲಿದೆ. ಆದರೆ ಕರಾವಳಿ, ದಕ್ಷಿಣ ಕನ್ನಡದಲ್ಲಿ ಮಳೆಯ ಆರ್ಭಟಕ ಮುಂದಿನ ಮೂರು ದಿನಗಳ ಕಾಲ ಮುಂದುವರೆಯಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ,ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ 26 ಡಿಗ್ರಿ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಸುಬ್ರಹ್ಮಣ್ಯ, ಬೆಳ್ತಂಗಡಿ, ಶಿರಾಲಿ, ಆಗುಂಬೆಯಲ್ಲಿ ಹೆಚ್ಚು ಮಳೆಯಾಗಿದೆ. ಧರ್ಮಸ್ಥಳ, ಗೋಕರ್ಣ, ಹೊನ್ನಾವರ, ಶೃಂಗೇರಿ, ಮಂಗಳೂರು ಏರ್‌ಪೋರ್ಟ್, ಬ್ರಹ್ಮಾವರ, ಗುಬ್ಬಿ, ಸುಳ್ಯ, ಅಜ್ಜಂಪುರದಲ್ಲಿ ಮಳೆಯಾಗಿದೆ.
ರಾಜ್ಯದಲ್ಲಿ 2-3 ದಿನಗಳಿಂದ ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಸುರಿಸಿದ್ದ ಚಿತ್ತಾ ಮಳೆ, ಈಗ ದಕ್ಷಿಣ ಒಳನಾಡಿಗೆ ಚಿತ್ತೈಸಿದೆ. ಬುಧವಾರದಿಂದಲೇ ಮಳೆ ಆರ್ಭಟ ಆರಂಭವಾಗಿದ್ದು, ಶುಕ್ರವಾರದವರೆಗೆ ಮುಂದುವರಿಯುವ ಸಾಧ್ಯತೆ ಇದೆ.
ಗುರುವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.












Click it and Unblock the Notifications