ಹವಾಮಾನ ವರದಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ಜುಲೈ 05: ಬೆಂಗಳೂರಿನಲ್ಲಿ ಇಂದು ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್​ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದರೂ ಈ ಬಾರಿ ಈವರೆಗೂ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಸುರಿದಿಲ್ಲ. ಕೆಲವು ಭಾಗಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಿದ್ದರೆ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. ಜಲಾನಯನ ಪ್ರದೇಶಗಳ ರೈತರು ಮುಂದಿನ ದಿನಗಳಲ್ಲಿ ಹೇಗೆ ಎಂಬುದಾಗಿ ಯೋಚಿಸುತ್ತಿದ್ದರು. ಮಲೆನಾಡು ಭಾಗದಲ್ಲೂ ಹೇಳಿಕೊಳ್ಳುವಂತಹ ಮಳೆ ಈವರೆಗೂ ಆಗಿಲ್ಲ. ಮುಂದಿನ ದಿನಗಳಲ್ಲಿ ಉತ್ತಮವಾಗಿ ಮಳೆಯಾದರೆ ಮಾತ್ರ ರೈತರು ಈಗ ಬೆಳೆದಿರುವ ಬೆಳೆಗಳು ಉಳಿದುಕೊಳ್ಳಲಿವೆ. ಹಾಗೂ ಜಲಾಶಯಗಳು ಭರ್ತಿಯಾಗಲಿವೆ. ಹವಾಮಾನ ಇಲಾಖೆ ಸಹ ಈ ಬಾರಿ ಮುಂಗಾರು ಸಾಧಾರಣವಾಗಿ ಇರಲಿದೆ ಎಂದು ಹೇಳಿತ್ತು.
ಜುಲೈ 7ರವರೆಗೆ ಬೆಂಗಳೂರಿಗೆ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 ಹಲವು ಜಿಲ್ಲೆಗಳಲ್ಲಿ ಮಳೆ

ಹಲವು ಜಿಲ್ಲೆಗಳಲ್ಲಿ ಮಳೆ

ರಾಜ್ಯದಲ್ಲಿ ಕೆಲವು ದಿನಗಳಿಂದ ಮಾಯವಾಗಿದ್ದ ಮಳೆ ಭಾನುವಾರ ಕೆಲವೆಡೆ ಸುರಿದಿದೆ. ಹಾಸನ, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವೆಡೆ ಮಳೆಯಾಗಿದೆ. ಬೆಣ್ಣೆ‌ನಗರಿ ದಾವಣಗೆರೆ ಸುತ್ತಮುತ್ತ ಭಾರಿ ಮಳೆ ದಾವಣಗೆರೆ ಸುತ್ತಮುತ್ತ ಸುರಿದ ಮಳೆಯಿಂದಾಗಿ ಮೆಕ್ಕೆ ಜೋಳ, ಸೇರಿ ವಿವಿಧ ಬೆಳೆ ಬೆಳೆದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹರಿಹರ, ಕುಂದವಾಡ, ಶಾಮನೂರು, ಅನಗೋಡು, ಸೇರಿ ಮುತ್ತ ಸೇರಿ ಹಲವೆಡೆ ಭಾರಿ ಮಳೆಯಾಗಿದೆ. ಕಳೆದ 20 ದಿನಗಳಿಂದ ಮಳೆ ಇಲ್ಲದೆ ರೈತರು ಕಂಗಲಾಗಿದ್ದರು. ಮಳೆಯಿಲ್ಲದೆ ಬೆಳೆಗಳೆಲ್ಲಾ ಒಣಗಿ ನಿಂತಿದ್ದವು. ಇದೀಗ ಸುರಿದ ಮಳೆಯಿಂದ ರೈತರ ಮುಖದಲ್ಲಿ ಸಂತಸ ಮೂಡಿದೆ.

 ಬೆಂಗಳೂರಿನಲ್ಲಿ ಭಾರಿ ಮಳೆ

ಬೆಂಗಳೂರಿನಲ್ಲಿ ಭಾರಿ ಮಳೆ

ನಗರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮೆಜೆಸ್ಟಿಕ್, ಮಲ್ಲೇಶ್ವರಂ, ರಾಜಾಜಿನಗರ, ಗಾಂಧಿನಗರ, ಗೋವಿಂದರಾಜ ನಗರ, ಕಾಮಾಕ್ಷಿ ಪಾಳ್ಯ, ವಿಜಯನಗರ, ಪಟ್ಟೇಗಾರ ಪಾಳ್ಯ, ರಾಜಾಜಿ ನಗರ, ಸುಮ್ಮನಹಳ್ಳಿ, ನಾಗರಭಾವಿ, ಜಾಲಹಳ್ಳಿ ಸೇರಿದಂತೆ ಅನೇಕ ಕಡೆ ಮಳೆ ಆರ್ಭಟ ಜೋರಾಗಿತ್ತು.

Recommended Video

    ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ: ಎಲ್ಲೆಲ್ಲಿ ಮುಂಗಾರು ಮಳೆಯ ಆರ್ಭಟ | Oneindia Kannada
     ರಾಜ್ಯದ ಬಹುತೇಕ ಕಡೆ ಮಳೆ

    ರಾಜ್ಯದ ಬಹುತೇಕ ಕಡೆ ಮಳೆ

    ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮತ್ತೆ ಮಳೆಯಾಗುತ್ತಿದೆ. ಇಂದು ಕೂಡ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ಜುಲೈ 7ರವರೆಗೂ ಮಳೆ ಮುಂದುವರೆಯಲಿದೆ ಮತ್ತು ಇನ್ನೆರಡು ದಿನ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿನೀಡಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+