ಮೇ 22ರಂದು ರಾಜ್ಯದಲ್ಲಿ ಭಾರಿ ಮಳೆ, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು, ಮೇ 21: ಕರ್ನಾಟಕದ ಸಾಕಷ್ಟು ಪ್ರದೇಶಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Recommended Video

      Karnatakaದ ಕೆಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆ | Oneindia Kannada

      ತೌಕ್ತೆ ಚಂಡಮಾರುತದ ಬಳಿಕ ಮಳೆ ಕಡಿಮೆಯಾಗಿದ್ದರೂ ಕೂಡ ನಿತ್ಯ ಹಲವು ಭಾಗಗಳಲ್ಲಿ ಮಳೆಯಾಗುತ್ತಲೇ ಇದೆ. ಮೇ 22 ರಂದು ರಾಜ್ಯದಲ್ಲಿ ಭಾರಿ ಮಳೆ ಸುರಿಯಲಿದ್ದು, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

      ಇಂದು ಕರ್ನಾಟಕ, ಗೋವಾ, ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ, ಕರ್ನಾಟಕದ ದಕ್ಷಿಣ ಹಾಗೂ ಕರಾವಳಿ ಭಾಗದಲ್ಲಿಮಳೆಯಾದರೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.

       ಮಳೆಯಾಗಿರುವ ಪ್ರದೇಶಗಳು

      ಮಳೆಯಾಗಿರುವ ಪ್ರದೇಶಗಳು

      ಭಟ್ಕಳ, ಗೌರಿಬಿದನೂರು, ಆನೇಕಲ್, ಭಾಗಮಂಡಲ, ಪರಶುರಾಂಪುರ, ರಾಯಲ್‌ಪಾಡು, ಕೂಡ್ಲಿಗಿ, ಕಾರವಾರ, ವಿಟ್ಲ, ಅಂಕೋಲಾ, ಕಾರ್ಕಳ, ಶ್ರೀರಂಗಪಟ್ಟಣ, ಬಂಗಾರಪೇಟೆ, ಗೋಪಾಲನಗರದಲ್ಲಿ ಮಳೆಯಾಗಿದೆ.

       ಮಳೆಯಾಗಲಿರುವ ಪ್ರದೇಶಗಳು

      ಮಳೆಯಾಗಲಿರುವ ಪ್ರದೇಶಗಳು

      ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

       ಯಾವ ಜಿಲ್ಲೆಗಳಿಗೆ ಮಳೆಯ ಯೆಲ್ಲೋ ಅಲರ್ಟ್

      ಯಾವ ಜಿಲ್ಲೆಗಳಿಗೆ ಮಳೆಯ ಯೆಲ್ಲೋ ಅಲರ್ಟ್

      ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

       ಬೆಂಗಳೂರಲ್ಲಿ ಮಳೆ

      ಬೆಂಗಳೂರಲ್ಲಿ ಮಳೆ

      ಬೆಂಗಳೂರಿನ ಹಲವೆಡೆ ಇಂದು ಮಳೆಯಾಗಿದೆ, ಸಿಲ್ಕ್‌ಬೋರ್ಡ್, ಕೋರಮಂಗಲ, ಮಾರತ್ತಹಳ್ಳಿ, ಎಚ್‌ಎಎಲ್‌, ಕಾರ್ಪೊರೇಷನ್, ಇಂದಿರಾನಗರ ಸೇರಿದಂತೆ ಹಲವು ಕಡೆ ಮಳೆಯಾಗಿದೆ. ಎಚ್‌ಎಎಲ್‌ನಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+