ಕರ್ನಾಟಕದಲ್ಲಿ ಮುಂದಿನ 4 ದಿನ ಭಾರಿ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ಜನವರಿ 05:ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜನವರಿ 8ರವರೆಗೆ ಮಳೆ ಮುಂದುವರೆಯಲಿದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಳೆದ ಮೂರು ದಿನಗಳಿಂದಲೂ ರಾಜ್ಯದಲ್ಲಿ ಮೋಡಕವಿದ ವಾತಾವರಣ ಕಂಡುಬರುತ್ತಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ಮಳಯಾಗುವ ಸಾಧ್ಯತೆ ಇದೆ.

ಈಶಾನ್ಯ ಮುಂಗಾರು ಮಾರುತಗಳು ಪ್ರಬಲವಾಗಿರುವುದರಿಂದ ಮೋಡಕವಿದ ವಾತಾವರಣ ಕಂಡುಬರುತ್ತಿದ್ದು, ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಹಾಗೂ ರಾವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರವಿದ್ದು, 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್‌ನಲ್ಲಿ ಕನಿಷ್ಠ 12.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಜನವರಿ 8ರವರೆಗೂ ಮಳೆ

ಜನವರಿ 8ರವರೆಗೂ ಮಳೆ

ಈಶಾನ್ಯದ ಕಡೆಯಿಂದ ಬಲವಾದ ಮೇಲ್ಮೈ ಗಾಳಿ ಬೀಸುತ್ತಿದ್ದು, ಜನವರಿ 8ರವರೆಗೂ ಇದೇ ರೀತಿಯ ಮೋಡಕವಿದದ ವಾತಾವರಣ ಮುಂದುವರೆಯಲಿದೆ. ರಾಜ್ಯದ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ

ಈ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಧರ್ಮಸ್ಥಳ, ಶಿವಮೊಗ್ಗ, ಭಾಗಮಂಡಲ, ಸುಳ್ಯ, ಹುಂಚದಕಟ್ಟೆ, ಲಕ್ಕವಳ್ಳಿ, ಬಳ್ತಂಗಡಿ, ಸುಬ್ರಹ್ಮಣ್ಯ, ಹೊಸನಗರ, ಕಳಸ, ಕೊಪ್ಪದಲ್ಲಿ ಮಳೆಯಾಗಿದೆ.

ಮಳೆಯಾಗಲಿರುವ ಪ್ರದೇಶಗಳು

ಮಳೆಯಾಗಲಿರುವ ಪ್ರದೇಶಗಳು

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ಮೈಸೂರಿನಲ್ಲಿ ಮಳೆಯಾಗಲಿದೆ.
ಚಿಕ್ಕಮಗಳೂರು, ಹಾಸನ,ಶಿವಮೊಗ್ಗ, ಕೊಡಗಿನಲ್ಲಿ ಜನವರಿ 6 ರಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+