ರಾಜ್ಯದಲ್ಲಿ ಮೇ 3ರವರೆಗೂ ಮಳೆ, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಏಪ್ರಿಲ್ 29: ರಾಜ್ಯದಲ್ಲಿ ಮೇ 3ರವರೆಗೂ ಮಳೆಯಾಗಲಿದ್ದು, 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗ್ಗಿನ ಸಮಯದಲ್ಲಿ ಬಿಸಿಲು ಕಾಣಿಸಿಕೊಂಡರೂ ಸಂಜೆ ಸಮಯದಲ್ಲಿ ಮಳೆಯಾಗಲಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರದಲ್ಲೂ ಮಳೆಯಾಗಲಿದೆ.

ಮಳೆಯಾಗಿರುವ ಪ್ರದೇಶಗಳು
ಬೈಲಹೊಂಗಲ, ಹುಂಚದಕಟ್ಟೆ, ಕಲ್ಘಟಗಿ, ನರಗುಂದ, ಬೆಳಗಾವಿ, ಧಾರವಾಡ, ಕುಂದಗೋಳ, ಕಳಸ, ಬಾಳೆಹೊನ್ನೂರು, ಹೊಸನಗರ, ಹಳಿಯಾಳ, ಯಲ್ಲಾಪುರ, ಹಾವೇರಿ, ಶಿಗ್ಗಾವ್, ಶೃಂಗೇರಿ, ಬೀದರ್‌ನಲ್ಲಿ ಮಳೆಯಾಗಿದೆ.

ಬೆಂಗಳೂರು ಹವಾಮಾನ ವರದಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು ನಗರದಲ್ಲಿ 33.0 ಡಿಗ್ರಿ ಸೆಲ್ಸಿಯಸ್21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಎಚ್‌ಎಎಲ್‌ನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಳೆಯಾಗಲಿರುವ ಪ್ರದೇಶಗಳು
ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಮಂಡ್ಯ, ಕೋಲಾರದಲ್ಲೂ ಮಳೆಯಾಗಲಿದೆ.
Recommended Video

ಮಹಾರಾಷ್ಟ್ರಲ್ಲಿ ಮಳೆ
ಏಪ್ರಿಲ್ 30ರಿಂದ ಮೇ 1ರವರೆಗೆ ಮಹಾರಾಷ್ಟ್ರ, ತಮಿಳುನಾಡು, ಜಮ್ಮು ಮತ್ತು ಕಾಶ್ಮೀರ, ಬಲ್ಟಿಸ್ತಾನ್, ಮುಜಾಫರಾಬಾದ್, ಹಿಮಾಚಲಪ್ರದೇಶ, ಹರ್ಯಾಣ, ಲಡಾಖ್, ತೆಲಂಗಾಣ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ.

Click it and Unblock the Notifications