ಕರ್ನಾಟಕದಲ್ಲಿ ಮತ್ತೆ ಮಳೆ ಶುರು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಏಪ್ರಿಲ್ 13: ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದ್ದು, ಕಳೆದ ಮೂರು ದಿನಗಳಿಂದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿದೆ.
ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿದ್ದು, ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 37.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಲ್ಲೆಲ್ಲಿ ಮಳೆಯಾಗಿದೆ?
ಯಲ್ಲಾಪುರ, ಧರ್ಮಸ್ಥಳ, ಮಂಗಳೂರು, ನಿಪ್ಪಾಣಿ, ಬಾಗಲಕೋಟೆ, ಹಳಿಯಾಳ, ವಿರಾಜಪೇಟೆ, ಕಮಲಾಪುರ, ರಾಯ್‌ಭಾಗ್, ಶಿವಮೊಗ್ಗದಲ್ಲಿ ಮಳೆಯಾಗಿದೆ.

7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಏಪ್ರಿಲ್ 17ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಹವಾಮಾನ ವರದಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ನಗರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಲ್‌ನಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮಳೆಯಾಗುವ ಸಾಧ್ಯತೆ ಇದೆ.
Recommended Video

ಮಳೆಯಾಗಲಿರುವ ಜಿಲ್ಲೆಗಳು
ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಇನ್ನು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.












Click it and Unblock the Notifications