ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಮುಂದಿನ 3 ದಿನ ಭಾರಿ ಮಳೆ
ಬೆಂಗಳೂರು, ಮೇ 07: ರಾಜ್ಯದ 7 ಜಿಲ್ಲೆಗಳಿಗೆ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ, ಕನ್ನಡ, ಉಡುಪಿಯ, ಶಿವಮೊಗ್ಗ ಸೇರಿದಂತೆ ಹಲವೆಡೆ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ.ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅಧಿಕ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಹುಬ್ಬಳ್ಳಿ ನಗರದಲ್ಲಿ ಧಾರಾಕಾರ ಮಳೆಯಾಗಿದೆ, ಲಾಕ್‌ಡೌನ್ ಸಡಿಲಿಕೆಯ ಅವಧಿಯಾಗಿದ್ದರಿಂದ ತರಕಾರಿ, ಅಗತ್ಯ ವಸ್ತುಗಳ ಖರೀದಿಗೆ ಮಳೆ ಅಡ್ಡಿಯಾಗಿದೆ. ರಸ್ತೆ, ಚರಂಡಿಗಳು ತುಂಬಿ ಹರಿಯುತ್ತಿವೆ.

ಮಳೆಯಾಗಿರುವ ಪ್ರದೇಶಗಳ ಬಗ್ಗೆ ಮಾಹಿತಿ
ಪುತ್ತೂರು, ಸುಬ್ರಹ್ಮಣ್ಯ, ಗದಗ, ದಾವಣಗೆರೆ, ಸುಳ್ಯ, ಮಾಣಿ, ಶ್ರವಣಬೆಳಗೊಳ, ಮಂಚಿಕೆರೆ, ಯಲ್ಲಾಪುರ, ಹುನಗುಂದ, ಸಂಕೇಶ್ವರ, ಚನ್ನಗಿರಿ, ಸಿದ್ದಾಪುರ, ಹರಪನಹಳ್ಳಿ, ಮಹಾಲಿಂಗಪುರ, ಜಮಖಂಡಿ, ವಿಜಯಪುರ, ಶಿರಾಲಿ, ಕಮಲಾಪುರ, ನಿಪ್ಪಾಣಿ, ತರೀಕೆರೆ, ತಾಳಗುಪ್ಪ, ತ್ಯಾಗರ್ತಿ, ಹೊಸದುರ್ಗದಲ್ಲಿ ಮಳೆಯಾಗಲಿದೆ.

ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 33.7 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23.9 ಡಿಗ್ರಿ ಎಚ್‌ಎಎಲ್‌ನಲ್ಲಿ ಸೆಲ್ಸಿಯಸ್, 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅಧಿಕ ಮಳೆಯಾಗಲಿದೆ ಎಂದು ಹೇಳಲಾಗಿದೆ.
Recommended Video

ಉತ್ತರ ಒಳನಾಡಿನಲ್ಲೂ ಮಳೆ
ಉತ್ತರ ಒಳನಾಡಿನ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.












Click it and Unblock the Notifications