2 ದಿನ ರಾಜ್ಯದಲ್ಲಿ ಭಾರಿ ಮಳೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಮೇ 03: ಮುಂದಿನ 2 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸುರಿಯಲಿದ್ದು, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಳೆದ ಎರಡು ವಾರಗಳಿಂದ ನಿರಂತರವಾಗಿ ಸಂಜೆಯ ಸಮಯದಲ್ಲಿ ಈ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ.

ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ
ಬೆಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನು ಕೆಐಎಎಲ್‌ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಲ್ಲೆಲ್ಲಿ ಮಳೆಯಾಗಿದೆ
ಹೊನ್ನಾವರ, ಸಿದ್ದಾಪುರ, ತಾಳಗುಪ್ಪ, ಹುಂಚದಕಟ್ಟೆ, ಬೆಳ್ತಂಗಡಿ, ದಕ್ಷಿಣ ಕನ್ನಡ, ಹಾವೇರಿ, ಮೂಡಬಿದಿರೆ, ಪುತ್ತೂರು, ಬೆಳಗಾವಿ, ಹುಮ್ನಾಬಾದ್, ಬೇವೂರು, ಸಾಗರ, ಸೊರಬದಲ್ಲಿ ಮಳೆಯಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರದಲ್ಲಿ ಮಳೆಯಾಗಲಿದೆ. ಕಲಬುರಗಿಯಲ್ಲಿ 39.3 ಡಿಗ್ರಿ ಸೆಲ್ಸಿಯಸ್‌ನಷ್ಟು ಗರಿಷ್ಠ ಉಷ್ಣಾಂಶ ದಾಖಲಾಗಿದೆ.
Recommended Video

ದಕ್ಷಿಣ ಒಳನಾಡಿನ ಹಲವೆಡೆ ಮಳೆ
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ.












Click it and Unblock the Notifications