ದಕ್ಷಿಣ ಕನ್ನಡ ಮತ್ತು ಉಡುಪಿಗೆ ಭಾರಿ ಮಳೆಯ ಮುನ್ಸೂಚನೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ಜನವರಿ 10: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಒಂದು ವಾರದಿಂದ ಮಳೆಯಾಗುತ್ತಿದೆ. ಪೂರ್ವ ಅಲೆಗಳ ಪರಿಣಾಮದಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಇನ್ನೂ ಮೂರು ದಿನ ಮಳೆಯ ಆರ್ಭಟ ಮುಂದುವರೆಯಲಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಜನವರಿ 13ರವರೆಗೂ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ 5 ದಿನಗಳಿಂದ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಇನ್ನೂ 3 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

 ಅತಿ ಹೆಚ್ಚು ಮಳೆಯಾಗಿರುವ ಪ್ರದೇಶಗಳು

ಅತಿ ಹೆಚ್ಚು ಮಳೆಯಾಗಿರುವ ಪ್ರದೇಶಗಳು

ಸವಣೂರಿನಲ್ಲಿ 14 ಸೆಂ.ಮೀನಷ್ಟು ಮಳೆಯಾಗಿದೆ. ಹಾವೇರಿ, ರಾಣೆಬೆನ್ನೂರು, ಹಾವೇರಿ ಎಪಿಎಂಸಿ, ಭಾಗಮಂಡಲ, ಶಿಕಾರಿಪುರ, ಶಿಗ್ಗಾಂ, ಕೆರೂರು, ದಾವಣಗೆರೆ, ಬನವಾಸಿ, ಮೂರ್ನಾಡು, ಪಂಚನಹಳ್ಳಿ, ಸಿದ್ದಾಪುರ, ಕೊಪ್ಪ, ಧಾರವಾಡ, ಸುಳ್ಯ, ಭರಮಸಾಗರ, ನರಗುಂದ, ಜಯಪುರ, ವಿರಾಜಪೇಟೆ, ಹರಪ್ಪನಹಳ್ಳಿ, ಸಾಗರ, ತಾಳಗುಪ್ಪ, ತ್ಯಾಗರ್ತಿ, ಹೊನ್ನಾಳಿ, ಚನ್ನಗಿರಿಯಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ

ಬೆಂಗಳೂರು ವಾತಾವರಣ

ಬೆಂಗಳೂರಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. 26 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇಂದು ಕೂಡ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೀದರ್‌ನಲ್ಲಿ 16.0 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಉತ್ತರ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆ

ಉತ್ತರ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದ್ದು,ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.

 ದಕ್ಷಿಣ ಒಳನಾಡಿನಲ್ಲಿ ಮಳೆ

ದಕ್ಷಿಣ ಒಳನಾಡಿನಲ್ಲಿ ಮಳೆ

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+