ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರಿ ಮಳೆ

ಬೆಂಗಳೂರು, ಆಗಸ್ಟ್ 23: ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಸಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ.

Rain

ಬೆಂಗಳೂರಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.ಕೊಡಗು, ನಾಪೊಕ್ಲು ಹಾಗೂ ಭಾಗಮಂಡಲದಲ್ಲಿ ಶುಕ್ರವಾರ ಭಾರಿ ಮಳೆಯಾಗಿದ್ದು, ಬಳಿಕ ಸಾಧಾರಣ ಮಳೆ ಸುರಿದಿದೆ.

ಕೊಡಗು ಜಿಲ್ಲೆ ಮಳೆ ವಿವರ, ಹಾರಂಗಿ ಜಲಾಶಯ ನೀರಿನ ಮಟ್ಟ

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿದ್ದು, ಹಲವೆಡೆ ಸಾಧಾರಣ ಮಳೆಯಾಗಿದೆ. ಆಗುಂಬೆ, ತೀರ್ಥಹಳ್ಳಿ ಭಾಗದಲ್ಲಿ ಮಳೆ ಕಡಿಮೆಯಾಗಿರುವ ಕಾರಣ ತುಂಗಾ ಜಲಾಶಯದ ನೀರಿನ ಮಟ್ಟತಗ್ಗಿದೆ. 186 ಅಡಿ ನೀರು ಸಂಗ್ರಹ ಸಾಮರ್ಥ್ಯದ ಭದ್ರಾ ಜಲಾಶಯದ ಮಟ್ಟ181.10 ಅಡಿಗೆ ತಲುಪಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+