ಏಪ್ರಿಲ್ 14ರವರೆಗೂ ರಾಜ್ಯದ ಹಲವೆಡೆ ಮಳೆ; ಕರಾವಳಿಯಲ್ಲಿ ಜೋರು ಮಳೆ ಸೂಚನೆ

ಬೆಂಗಳೂರು, ಏಪ್ರಿಲ್ 12: ಏಪ್ರಿಲ್ 14ರವರೆಗೂ ದಕ್ಷಿಣ ಭಾರತದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದಲ್ಲಿಯೂ ಸೋಮವಾರದಿಂದ ಮೂರು ದಿನಗಳ ಕಾಲ ಮಳೆಯಾಗುವುದಾಗಿ ತಿಳಿಸಿದೆ.

ನೈಋತ್ಯ ಮಧ್ಯಪ್ರದೇಶದಿಂದ ಚಂಡಮಾರುತ ತಮಿಳುನಾಡಿನ ಕನ್ಯಾಕುಮಾರಿ ಹಾದುಹೋಗುವ ಪರಿಣಾಮ ದಕ್ಷಿಣ ಭಾರತದ ಕೆಲವೆಡೆ ಮಳೆಯಾಗಲಿದೆ. ಬುಧವಾರದವರೆಗೂ ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಸೂಚನೆ ನೀಡಿದೆ. ಮುಂದೆ ಓದಿ...

 ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಏಪ್ರಿಲ್ 13 ಹಾಗೂ 14ರಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವುದಾಗಿ ತಿಳಿದುಬಂದಿದೆ. ಈ ಎರಡು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಅಬ್ಬರದ ಮಳೆಯಾಗಿದ್ದು, ಕೆಲವೆಡೆ ಹಾನಿ ಸಂಭವಿಸಿದೆ.

 ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ಏಪ್ರಿಲ್ 14ರವರೆಗೂ ಚಿಕ್ಕಮಗಳೂರು, ಕೊಡಗು, ಮಂಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವುದೆಂದು ತಿಳಿದುಬಂದಿದೆ. ಈಗಾಗಲೇ ದಕ್ಷಿಣ ಕನ್ನಡದಲ್ಲಿ ಮಳೆಯಾಗಿದೆ. ಹಾಸನ, ವಿಜಯಪುರ, ಕಲಬುರಗಿ, ಧಾರವಾಡ, ಬೆಳಗಾವಿ, ಮೈಸೂರು ಜಿಲ್ಲೆಗಳಲ್ಲಿಯೂ ಚದುರಿದ ಮಳೆಯಾಗುವುದಾಗಿ ತಿಳಿದುಬಂದಿದೆ.

 ಕೇರಳ, ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆ

ಕೇರಳ, ತಮಿಳುನಾಡಿನಲ್ಲಿ ಗುಡುಗು ಸಹಿತ ಮಳೆ

ಏಪ್ರಿಲ್ 12ರಿಂದ ಮುಂದಿನ ಐದು ದಿನಗಳ ಕಾಲ ಕೇರಲ ಹಾಗೂ ತಮಿಳುನಾಡಿನಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಇದರ ಪ್ರಭಾವ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕಾಣಿಸಿಕೊಳ್ಳಲಿರುವುದಾಗಿ ತಿಳಿದುಬಂದಿದೆ. ಸೋಮವಾರ ಅರುಣಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶದಲ್ಲಿ ಮಳೆಯಾಗಲಿರುವುದಾಗಿ ಸೂಚನೆ ನೀಡಿದೆ.

Recommended Video

    Maharashtra LockDown : ದಿನೇ ದಿನೇ corona ಕಾಟ ಜಾಸ್ತಿ ಆಗ್ತಿದೆ! | Oneindia Kannada
     ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ದಾಖಲು

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆ ದಾಖಲು

    ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕಳೆದ 24 ಗಂಟೆಗಳ ಕರ್ನಾಟಕದ ಮಳೆ ನಕ್ಷೆ ನೀಡಿದ್ದು, ಅತ್ಯಧಿಕ 80ಮಿ.ಮೀ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಜ್ಪೆ ಎಂಬಲ್ಲಿ ದಾಖಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+