ಕಾಫಿನಾಡಲ್ಲಿ ಮಳೆ ಹಾವಳಿ: 30 ವರ್ಷಗಳ ನಂತರ ಮುಳುಗಿದ ಹೆಬ್ಬಾಳೆ ಸೇತುವೆ!
ಚಿಕ್ಕಮಗಳೂರು, ಜುಲೈ.15: ಕಾಫಿನಾಡು ಮಲೆನಾಡು ಭಾಗದಲ್ಲಿ ವರುಣ ತನ್ನ ಆರ್ಭಟ ಮುಂದುವರೆಸಿದ್ದಾನೆ. ಕಳೆದ ಹತ್ತು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದ ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದರೆ, ಹೊರನಾಡು ಅನ್ನಪೂರ್ಣೇಶ್ವರಿ ದೇಗುಲಕ್ಕೆ ಸಂಪರ್ಕ ಕಲ್ಪಿಸೋ ಹೆಬ್ಬಾಳೆ ಸೇತುವೆ ಆರನೇ ಬಾರಿ ಮುಳುಗಿ ದಾಖಲೆ ನಿರ್ಮಿಸಿದೆ.
ಇನ್ನು ನೀರಿನ ಪ್ರಮಾಣ ಹೆಚ್ಚುತ್ತಲೇ ಇದೆ. ಇದರೊಂದಿಗೆ 30 ವರ್ಷಗಳ ನಂತರ ಹೆಬ್ಬಾಳೆ ಸೇತುವೆ 24 ಗಂಟೆ ಕಾಲ ಮುಳುಗಡೆಯಾಗಿ ಇತಿಹಾಸ ಸೃಷ್ಟಿಸಿದೆ. ಇನ್ನು ಜಿಲ್ಲೆಯ ಮೂಡಿಗೆರೆ, ಕೊಪ್ಪ, ಶೃಂಗೇರಿಯ ಭಾಗದಲ್ಲೂ ಧಾರಾಕಾರ ಮಳೆಯಾಗುತ್ತಿದೆ.
ಶೃಂಗೇರಿ ಘಟ್ಟ ಪ್ರದೇಶದ ಮಳೆಗೆ ತುಂಗಾ ನದಿ ಮೈದುಂಬಿ ಹರಿಯುತ್ತಿದ್ದು, ಹೇಮಾವತಿ ನದಿ ಕೂಡ ಮೈ ದುಂಬಿ ಹರಿಯುತ್ತಿದೆ. ಇತ್ತ ಗಾಳಿಸಹಿತ ಭಾರೀ ಮಳೆಯಿಂದಾಗಿ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ರಸ್ತೆಗೆ ಮರ ಬಿದ್ದು ಕೂವೆ ಹಾಗೂ ಆನೆಗುಂಡಿ ಗ್ರಾಮ ಸಂಪರ್ಕ ಕಡಿತಗೊಂಡಿದೆ.

ಚಿಕ್ಕಮಗಳೂರಿನ ಭಾರೀ ಮಳೆ ಗಾಳೆಗೆ ತಾಲೂಕಿನ ಭಕ್ತರಹಳ್ಳಿ ಯಲ್ಲಿ ಬೃಹತ್ ಮರವೊಂದು ರಸ್ತೆಗೆ ಬಿದಿದೆ. ತರೀಕೆರೆ-ಚಿಕ್ಕಮಗಳೂರು ನಗರಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ರಸ್ತೆಗೆ ಅಡ್ಡಲಾಗಿ ಮರಗಳು ಉರುಳಿದ ಪರಿಣಾಮ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.
ಅಷ್ಟೇ ಅಲ್ಲದೆ, ಭಾರೀ ಗಾಳಿ ಮಳೆಗೆ ಚಿಕ್ಕಮಗಳೂರು ತಾಲೂಕಿನ ಇತಿಹಾಸ ಪ್ರಸಿದ್ಧ ತೇಗೂರು ಪರಮೇಶ್ವರ ದೇವಸ್ಥಾನದ ಮೇಲ್ಛಾವಣಿ ಕುಸಿದಿದೆ. ನಿನ್ನೆ ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಗಣಪತಿ, ಶಿವ, ನಂದಿ, ಸುಬ್ರಹ್ಮಣ್ಯ ಮೂರ್ತಿಗಳಿಗೆ ಯಾವುದೇ ಅನಾಹುತವಾಗಿಲ್ಲ.
ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನ ಇದಾಗಿದ್ದು, ಕಳೆದ ಹತ್ತು ವರ್ಷಗಳಿಂದ ದುರಸ್ತಿ ಮಾಡುವಂತೆ ಜಿಲ್ಲಾಡಳಿತಕ್ಕೆ ಮನವಿ ನೀಡಲಾಗಿತ್ತು. ಆದರೆ ಮೇಲ್ಛಾವಣಿ ಹಾಗೂ ಗೋಡೆ ಕುಸಿತದಿಂದ ದೇವಸ್ಥಾನಕ್ಕೆ ಭಾಗಶಃ ಹಾನಿಯಾಗಿದ್ದು, ಮುಜರಾಯಿ ಇಲಾಖೆಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದ ಕಾರಣ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಇದರ ಜೊತೆಗೆ ಆಲ್ದೂರು ಸಮೀಪ ಬೃಹತ್ ಗಾತ್ರ ಮರವೊಂದು ರಸ್ತೆ ಬಿದ್ದು ಕೆಲ ಕಾಲ ಚಿಕ್ಕಮಗಳೂರು-ಶೃಂಗೇರಿ ಸಂಪರ್ಕ ಬಂದ್ ಆಗಿತ್ತು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications