ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆ
ಬೆಂಗಳೂರು, ಡಿಸೆಂಬರ್ 16: ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ, ಉಳಿದೆಲ್ಲೆಡೆ ಒಣಹವೆ ಮುಂದುವರೆಯಲಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ. ಡಿಸೆಂಬರ್ 17 ರಂದು ಕೂಡ ಒಣಹವೆ ಇರಲಿದ್ದು, ಡಿಸೆಂಬರ್ 18 ರಿಂದ 20ರವರೆಗೆ ಮಳೆಯಾಗಲಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಆಕಾಶ ಶುಭ್ರವಾಗಿದೆ. 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ದಾವಣಗೆರೆಯಲ್ಲಿ 12 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನು ದೇಶವನ್ನು ಗಮನಿಸುವುದಾದರೆ ಪಂಜಾಬ್, ಹರ್ಯಾಣ, ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶದಲ್ಲಿ ಚಳಿ ಹೆಚ್ಚಾಗಿದೆ.
ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಪುದುಚೆರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗಲಿದೆ.
Recommended Video
ಕೋಟ್ಯಾಧಿಪತಿಯಾಗಲು ನಿಮಗೆ ಇಲ್ಲಿದೆ ಅವಕಾಶ!












Click it and Unblock the Notifications