ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಎರಡು ವಾರ ಮಳೆಯ ಅಬ್ಬರ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 10: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೊಂದು ತಿಂಗಳು ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 59 ವರ್ಷಗಳ ಬಳಿಕ ಮೊದಲ ಬಾರಿಗೆ ಅಕ್ಟೋಬರ್‌ ತಿಂಗಳಿಗೆ ಮುಂಗಾರು ವಿಸ್ತರಣೆಯಾಗಿದೆ.

ರಾಜ್ಯದಲ್ಲಿ ಮಳೆರಾಯನ ಆರ್ಭಟ ಹೆಚ್ಚಾಗಿದೆ. ಕಳೆದ ಕೆಲ ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ನಿನ್ನೆ ರಾಜಧಾನಿಯಲ್ಲಿ ಭಾರೀ ಮಳೆಯಾಗಿ ಸುಮಾರು 150ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದ್ದವು. ಇಂದು ಸಹ ಮಳೆರಾಯ ತನ್ನ ರೌದ್ರ ನರ್ತನ ತೋರಲಿದ್ದಾನೆ. ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆ ಮುನ್ಸೂಚನೆ: ಕರ್ನಾಟಕದ 23 ಜಿಲ್ಲೆಗಳಿಗೆ ಅಲರ್ಟ್ಭಾರಿ ಮಳೆ ಮುನ್ಸೂಚನೆ: ಕರ್ನಾಟಕದ 23 ಜಿಲ್ಲೆಗಳಿಗೆ ಅಲರ್ಟ್

ಬುಧವಾರ ಬೆಂಗಳೂರಿನಲ್ಲಿ ದಾಖಲೆಯ ಮಳೆ ಸುರಿದಿದ್ದು, 24 ಗಂಟೆಗಳಲ್ಲಿ 6 ಮಿ.ಮೀ ಮಳೆಯಾಗಿದೆ. ಹಾಸನ ಜಿಲ್ಲೆಯಲ್ಲಿ 47.4 ಮಿ.ಮೀ ಮಳೆ ಸುರಿದಿದೆ. ದಕ್ಷಿಣ ಮೈಸೂರು ಮತ್ತು ಮಂಗಳೂರು ಕಡೆ ಯಾವುದೇ ದಾಖಲೆಯ ಮಳೆಯಾಗಿಲ್ಲ ಎಂದು ವರದಿಯಾಗಿದೆ.

 ಅಕ್ಟೋಬರ್ 13ರವರೆಗೂ ಮಳೆ ಮುಂದುವರೆಯಲಿದೆ

ಅಕ್ಟೋಬರ್ 13ರವರೆಗೂ ಮಳೆ ಮುಂದುವರೆಯಲಿದೆ

ಭಾನುವಾರದವರೆಗೆ ಕರ್ನಾಟಕದ ಎಲ್ಲಾ ಭಾಗಗಳಲ್ಲೂ ಮಳೆಯಾಗಲಿದೆ. 24 ಗಂಟೆಗಳಲ್ಲಿ 115 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

 ಬೆಂಗಳೂರಲ್ಲೂ ಮಳೆ

ಬೆಂಗಳೂರಲ್ಲೂ ಮಳೆ

ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲೂ ಮಳೆ ಮುಂದುವರೆಯಲಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಒಂದೈದು ನಿಮಿಷ ಮಳೆ ಹೊಯ್ದರೂ ಸಾಕು ಇಡೀ ರಸ್ತೆಯ ತುಂಬೆಲ್ಲಾ ನೀರು ತುಂಬಿಕೊಂಡು ಕೆರೆಯಂತಾಗಿಬಿಡುತ್ತದೆ.

ಬೆಂಗಳೂರಲ್ಲಿ ಗುಡುಗು ಸಹಿತ ಭಾರಿ ಮಳೆ, ರಸ್ತೆಗಳು ಜಲಾವೃತಬೆಂಗಳೂರಲ್ಲಿ ಗುಡುಗು ಸಹಿತ ಭಾರಿ ಮಳೆ, ರಸ್ತೆಗಳು ಜಲಾವೃತ

 ಅಕ್ಟೋಬರ್ ಆರಂಭದಿಂದಲೂ ಮಳೆ ಹೆಚ್ಚು

ಅಕ್ಟೋಬರ್ ಆರಂಭದಿಂದಲೂ ಮಳೆ ಹೆಚ್ಚು

ಅಕ್ಟೋಬರ್​ ತಿಂಗಳ ಆರಂಭದಿಂದಲೂ ರಾಜ್ಯದಲ್ಲಿ ಅಧಿಕ ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಿದೆ ಬೆಂಗಳೂರು ಸೇರಿ ದಕ್ಷಿಣ ಭಾಗದಲ್ಲಿ ಭಾರೀ 77 ಮಿಮೀ ಮಳೆಯಾಗಿದೆ. ಇದು ಸಾಮಾನ್ಯಕ್ಕಿಂತ ಶೇ.63 ರಷ್ಟು ಹೆಚ್ಚಾಗಿದೆ. ಬೆಳಗಾವಿ ಧಾರವಾಡ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ 61 ಮಿ.ಮೀ ಮಳೆಯಾಗಿದ್ದು, ಶೇ.39ರಷ್ಟು ಮಳೆ ಹೆಚ್ಚಾಗಿದೆ.

ಮುಂದಿನ ಮೂರು ದಿನ ಬೆಂಗಳೂರಲ್ಲಿ ಭರ್ಜರಿ ಮಳೆಮುಂದಿನ ಮೂರು ದಿನ ಬೆಂಗಳೂರಲ್ಲಿ ಭರ್ಜರಿ ಮಳೆ

 ಮುಂದಿನ ಎರಡು ವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆ

ಮುಂದಿನ ಎರಡು ವಾರ ಬೆಂಗಳೂರಿನಲ್ಲಿ ಧಾರಾಕಾರ ಮಳೆ

ಮುಂದಿನ ಎರಡು ವಾರ ಬೆಂಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ. ಹವಾಮಾನ ಇಲಾಖೆಯ ಪ್ರಕಾರ ಈ ತಿಂಗಳ ಕೊನೆಯವರೆಗೆ ಬೆಂಗಳೂರು ಮಾತ್ರವಲ್ಲದೇ, ರಾಜ್ಯದ ಅನೇಕ ಕಡೆಗಳಲ್ಲಿ ಮಳೆಯಾಗಲಿದೆ. ಅಕ್ಟೋಬರ್ 23ರವರೆಗೆ ಬೆಂಗಳೂರಿಗರಿಗೆ ಮಳೆಯ ಹಾವಳಿ ತಪ್ಪಿದ್ದಲ್ಲ. ಶೇ.80-90ರಷ್ಟು ಮಳೆಯಾಗಲಿದೆ. ಹೀಗಾಗಿ ಬೆಂಗಳೂರಿಗರು ಈ ತಿಂಗಳು ಜಾಗರೂಕತೆಯಿಂದ ಇರಬೇಕಿದೆ.

ಮಳೆರಾಯ ರಾಜಧಾನಿಯಲ್ಲಿ ಮಾತ್ರವಲ್ಲದೇ, ರಾಜ್ಯದ ಉತ್ತರ ಮತ್ತು ದಕ್ಷಿಣ ಜಿಲ್ಲೆಗಳಲ್ಲೂ ಅಬ್ಬರಿಸಲಿದ್ದಾನೆ. ಈ ತಿಂಗಳ ಪೂರ್ತಿ ರಾಜ್ಯದಲ್ಲಿ ಮಳೆಯ ಆರ್ಭಟ ಇರಲಿದೆ. ಕರಾವಳಿ ಭಾಗಗಳಲ್ಲಿ ನಿರೀಕ್ಷಿತ ಮಳೆಯಾಗಲಿದೆ. ಈ ವಾರಾಂತ್ಯದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಬೀಳಲಿದೆ.

English summary
Heavy Rain Is Expected in Whole Month of October in State, including Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X