ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ: ಬೆಂಗಳೂರು ಹವಾಮಾನ ಹೇಗಿದೆ?

|
Google Oneindia Kannada News

ಬೆಂಗಳೂರು, ಮೇ 13: ಈ ವಾರಾಂತ್ಯದಲ್ಲಿ ಬೆಂಗಳೂರು ಸೇರಿ ವಿವಿಧೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಸೋಮವಾರದಿಂದ ಬೆಂಗಳೂರಿನಲ್ಲಿ ಬಿಸಿಲು ಹೆಚ್ಚಾಗಿದೆ. ಆದರೆ ಮೇ 14ರಂದು ಮಳೆ ಅಬ್ಬರಿಸಲಿದೆ ಎನ್ನುವ ಮುನ್ಸೂಚನೆ ದೊರೆತಿದೆ.ಗುರುವಾರದಿಂದ ಬೆಂಗಳೂರಲ್ಲಿ ಗುಡುಗು ಸಹಿತ ಭಾರೀ ಮಳೆ ಆಗಲಿದೆ. ಎರಡು-ಮೂರು ದಿನ ಈ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರಿ ಮಳೆ ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರಿ ಮಳೆ

ಸಂಜೆ ವೇಳೆಗೆ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ ಎನ್ನುವುದು ಹವಾಮಾನ ಇಲಾಖೆಯ ಎಚ್ಚರಿಕೆ.ಕಲಬುರಗಿಯಲ್ಲಿ ಅತಿ ಹೆಚ್ಚು ಅಂದರೆ 39.4 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದಲ್ಲಿ ವಿಪರೀತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಮೇ 14ರಂದು ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ: 1 ವಾರ ರಾಜ್ಯದಲ್ಲಿ ಮಳೆ ಮೇ 14ರಂದು ಬೆಂಗಳೂರಲ್ಲಿ ಭಾರಿ ಮಳೆ ಮುನ್ಸೂಚನೆ: 1 ವಾರ ರಾಜ್ಯದಲ್ಲಿ ಮಳೆ

ರಾಜ್ಯದ ಹಲವು ಭಾಗಗಳಲ್ಲಿ ಮಳೆ

ರಾಜ್ಯದ ಹಲವು ಭಾಗಗಳಲ್ಲಿ ಮಳೆ

ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಆಗುತ್ತಿದೆ. ಮುಂದಿನ ಐದು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಉತ್ತರ ಕರ್ನಾಟಕದ ವಿಜಯಪುರ, ಕಲ್ಬುರ್ಗಿ ಸೇರಿ ಮೊದಲಾದ ಕಡೆಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ.

ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ

ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ ಭಾಗದಲ್ಲೂ ಮಳೆ ಆಗಲಿದೆ.

ಹವಾಮಾನ ವರದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆಹವಾಮಾನ ವರದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ

ರಾಜ್ಯದೆಲ್ಲೆಡೆ ವಿಪರೀತ ಬಿಸಿಲು

ರಾಜ್ಯದೆಲ್ಲೆಡೆ ವಿಪರೀತ ಬಿಸಿಲು

ಎಲ್ಲೆಡೆ ಭಾರೀ ಬಿಸಿಲು ಇದ್ದು, ಜನರು ಸೆಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂದರ್ಭದಲ್ಲಿ ಮಳೆ ಆಗುತ್ತಿರುವುದು ಅನೇಕರಲ್ಲಿ ಖುಷಿ ತಂದಿದೆ. ಇನ್ನು, ಬೆಳೆ ಫಸಲು ನೀಡಲು ಬಂದಿರುವುದರಿಂದ ರೈತರು ಮಳೆಯಿಂದ ಕಂಗಾಲಾಗಿದ್ದಾರೆ.

ಮಂಗಳವಾರ ಎಲ್ಲೆಲ್ಲಿ ಮಳೆಯಾಗಿದೆ?

ಮಂಗಳವಾರ ಎಲ್ಲೆಲ್ಲಿ ಮಳೆಯಾಗಿದೆ?

ಯಲ್ಲಾಪುರ, ಹಳಿಯಾಳ, ಶಿಕಾರಿಪುರ, ಅರಸಾಳು, ಮಂಚಿಕೆರೆ, ಹಡಗಲಿ, ಭಾಗಮಂಡಲ, ಸುಳ್ಯ, ಸಂತೆಬೆನ್ನೂರು, ಹೊನ್ನಾವರ, ಪಣಂಬೂರ್, ದುರ್ಗ, ಜಯಪುರ, ಕಳಸ, ಬಾಳೆಹೊನ್ನೂರು, ಹಳೆಬೀಡು, ಮುಲ್ಕಿ, ಹಾವೇರಿ, ಮುಂಡಗೋಡು, ಮಂಕಿ, ಶಿರಾಲಿ, ಬಾದಾಮಿ, ಸಾಗರ, ಸೊರಬ, ಲಿಂಗನಮಕ್ಕಿ, ಶಿರಾಳಕೊಪ್ಪ, ಕಮ್ಮರಡಿ, ನಾಪೊಕ್ಲು, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗಿದೆ.

English summary
The meteorological department has issued a forecast of heavy rainfall over Bengaluru this weekend.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X