ಜನವರಿ 17ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು, ಜನವರಿ 14: ಜನವರಿ 17ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ. ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. 27 ಡಿಗ್ರಿ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ರಾಜ್ಯದ 8 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೀದರ್‌ನಲ್ಲಿ 12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Rainfall In These Districts Of Karnataka Till January 17

ಮುಂದಿನ ನಾಲ್ಕೈದು ದಿನಗಳ ಅವಧಿಯಲ್ಲಿ ವಾಯವ್ಯ ಭಾರತದಲ್ಲಿ ಒಳನಾಡು ಪ್ರದೇಶಗಳಲ್ಲಿ ಭಾರೀ ಹಿಮ, ಮಂಜಿನ ವಾತಾವರಣ ಸೃಷ್ಟಿಯಾಗಲಿದೆ.

ಕೆಳ ಮೇಲ್ಮೈ ವಲಯದಲ್ಲಿ ಹಾಗೂ ಕೊಮೊರಿನ್ ಪ್ರದೇಶದಲ್ಲಿ ಬಿರುಗಾಳಿಯ ಪ್ರಭಾವದಿಂದಾಗಿ ತಮಿಳುನಾಡು, ಪುದುಚೆರಿ ಮತ್ತು ಕಾರೈಕಲ್, ಕೇರಳ ಹಾಗೂ ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಗುಡುಗು, ಸಿಡಿಲು ಕೂಡಿದ ಸಾಧಾರಣ ಹಾಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಹವಾಮಾನ ಮುನ್ಸೂಚನಾ ಕೇಂದ್ರ(ಐಎಂಡಿ) ಹೇಳಿದೆ.

ಮೂರು ದಿನಗಳ ಬಳಿಕ ಈ ಪ್ರದೇಶಗಳಲ್ಲಿ ಮಳೆಯ ಚಟುವಟಿಕೆ ಇಳಿಕೆಯಾಗಲಿದೆ. ತಮಿಳುನಾಡು, ಪುದುಚೆರಿ ಮತ್ತು ಕರೈಕಲ್ ನಲ್ಲಿ ಜನವರಿ 14 ಮತ್ತು 15ರಂದು ಹಾಗೂ ಕೇರಳ ಮತ್ತು ಮಾಹೆಗಳಲ್ಲಿ ಜನವರಿ 15ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+