ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಸೆಂಬರ್ 31ರಿಂದ ಎರಡು ದಿನ ರಾಜ್ಯದಲ್ಲಿ ಮಳೆಯ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 29: ಡಿಸೆಂಬರ್ 31ರಿಂದ ಎರಡು ದಿನ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಉತ್ತರ ಒಳನಾಡಿಗೆ ಮಳೆಯ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆರಾಜ್ಯದ ಉತ್ತರ ಒಳನಾಡಿಗೆ ಮಳೆಯ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ

ನಗರದಲ್ಲಿ 29 ಡಿಗ್ರಿ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಬೀದರ್‌ನಲ್ಲಿ 9.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Rainfall Is Likely Over Karnataka From December 31

ರಾಜ್ಯಾದ್ಯಂತ ಚಳಿಯ ವಾತಾವರಣ ಮುಂದುವರೆದಿದ್ದು, ತಾಪಮಾನ ಕಡಿಮೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಉಡುಪಿಯಲ್ಲಿ 33 ಡಿಗ್ರಿ ಗರಿಷ್ಠ ಉಷ್ಣಾಂಶವಿರಲಿದೆ.

Recommended Video

ಧರ್ಮೆ ಗೌಡ ಕಾರ್ ಚಾಲಕ ಪ್ರತಿಕ್ರಿಯೆ| Dharme Gowda Car Driver | Oneindia Kannada

ಮಂಗಳೂರಿನಲ್ಲಿ 33 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿರಲಿದೆ. ಬೆಳಗಾವಿ 31-16, ಮೈಸೂರು 31-19, ಮಂಡ್ಯ 31-19, ರಾಮನಗರ 29-19, ಮಡಿಕೇರಿ 28-16, ವಿಜಯಪುರ 27-17 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರಲಿದೆ.

English summary
Rainfall Is Likely Over Karnataka From December 31, Dry weather prevailed over the State.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X