ಡಿಸೆಂಬರ್ 31ರಂದು ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ, ಉಳಿದೆಡೆ ಒಣಹವೆ
ಬೆಂಗಳೂರು, ಡಿಸೆಂಬರ್ 27: ಕರ್ನಾಟಕದ ಕೆಲವೆಡೆ ಡಿಸೆಂಬರ್ 31ರಂದು ಮಳೆಯಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಸಾಧಾರಣ ಮಳೆಯಾಗಲಿದೆ.
2.5 ಮಿ.ಮೀನಿಂದ 64.4 ಮಿ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಆಕಾಶ ಶುಭ್ರವಾಗಿದೆ. 29 ಡಿಗ್ರಿ ಗರಿಷ್ಠ ಉಷ್ಣಾಂಶ, 15 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದೆಲ್ಲೆಡೆ ಉಣಹವೆ ಮುಂದುವರೆಯಲಿದೆ. ಬೀದರ್‌ನಲ್ಲಿ 9.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಜಮ್ಮು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಲ್ಟಿಸ್ತಾನ, ಮುಜಾಫರಾಬಾದ್‌ನಲ್ಲಿ ಮಳೆಯಾಗಲಿದೆ. ಉತ್ತರಾಖಂಡ, ಪಂಜಾಬ್, ಹರ್ಯಾಣ, ಚಂಡೀಗಢದಲ್ಲಿ ಡಿಸೆಂಬರ್ 27-28ರಂದು ಹಿಮಪಾತದ ಜತೆಗೆ ಮಳೆಯಾಗಲಿದೆ ಎಂದು ಹೇಳಲಾಗಿದೆ.












Click it and Unblock the Notifications