ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲೆಯಲ್ಲಿ ಸಾಧಾರಣ ಮಳೆ
ಬೆಂಗಳೂರು, ಮೇ 23: ದಕ್ಷಿಣ ಕನ್ನಡ ಮತ್ತು ಹಾಸನ ಜಿಲ್ಲೆಯಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಿದೆ.
Recommended Video
ಸೋತಾಗ ಚೇತರಿಸಿಕೊಳ್ಳೋದು ಹೇಗೆ , ರಮೇಶ್ ಅರವಿಂದ್ ಹೇಳ್ತಾರೆ ಕೇಳಿ
ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಬೆಳ್ತಂಗಡಿ, ಹಾಸನ ಜಿಲ್ಲೆಯ ಶ್ರವಣಬೆಳಗೊಳ ಮತ್ತು ಕೊಡಗಿನ ಭಾಗಮಂಡಲದಲ್ಲಿ ಶುಕ್ರವಾರ ಮಳೆಯಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ 35.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಲಬುರ್ಗಿಯಲ್ಲಿ ಅತಿ ಹೆಚ್ಚು ಅಂದ್ರೆ 43.1 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣದ ಒಳನಾಡಿನ ಹಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಹಲವೆಡೆ ಒಣ ಹವೆ ಮುಂದುವರೆಯಲಿದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಬೀಳುವ ಸಾಧ್ಯತೆ ಇದೆ.












Click it and Unblock the Notifications