ಕೊಪ್ಪಳದಲ್ಲಿ ಸಾಧಾರಣ ಮಳೆ: ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ
ಬೆಂಗಳೂರು, ಮೇ 22: ಕೊಪ್ಪಳದ ಮುನಿರಾಬಾದ್ ಸೇರಿದಂತೆ ಕರ್ನಾಟಕದ ಕೆಲವೇ ಕೆಲವು ಪ್ರದೇಶಗಳಲ್ಲಿ ಮಾತ್ರ ಗುರುವಾರ ಸಾಧಾರಣ ಮಳೆಯಾಗಿದೆ. ಕರಾವಳಿ ಕರ್ನಾಟಕದಲ್ಲಿ ಒಣ ಹವೆ ಕಂಡುಬಂದಿದೆ.
Recommended Video
ಸೋತಾಗ ಚೇತರಿಸಿಕೊಳ್ಳೋದು ಹೇಗೆ , ರಮೇಶ್ ಅರವಿಂದ್ ಹೇಳ್ತಾರೆ ಕೇಳಿ
ಬೆಂಗಳೂರಿನಲ್ಲಿ ಗರಿಷ್ಠ 34.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಲಬುರ್ಗಿ ಅತಿ ಹೆಚ್ಚು ಅಂದ್ರೆ 42.6 ಡಿಗ್ರಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದಲ್ಲಿ ಒಣ ಹವೆ ಮುಂದುವರೆಯಲಿದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.












Click it and Unblock the Notifications