ರಾಜ್ಯಾದ್ಯಂತ ತಗ್ಗಿದ ಮುಂಗಾರು, ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು, ಆಗಸ್ಟ್ 10: ರಾಜ್ಯಾದ್ಯಂತ ಮುಂಗಾರು ತಗ್ಗಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ಕೂಡ ಮಳೆಯಾಗಲಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಎಚ್‌ಎಎಲ್‌ನಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಂಗಳೂರು ನಗರದಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಜುಲೈನಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಾಜ್ಯದ 13 ಜಿಲ್ಲೆಗಳಲ್ಲಿ ಪ್ರವಾಹದಿಂದ 2.03 ಲಕ್ಷ ಹೆಕ್ಟೇರ್‌ ಬೆಳೆ ಹಾನಿ ಸಂಭವಿಸಿದ್ದು, 10,538ಕ್ಕೂ ಹೆಚ್ಚು ಮನೆಗಳು ಜಖಂಗೊಂಡಿವೆ. 33,548 ವಿದ್ಯುತ್‌ ಕಂಬಗಳು ಧರೆಗುರುಳಿವೆ. 7,581 ಟ್ರಾನ್ಸ್‌ಫಾರ್ಮರ್‌ಗಳು ಜಖಂಗೊಂಡು ಕೋಟ್ಯಂತರ ರೂ. ನಷ್ಟ ಉಂಟಾಗಿದೆ.

ಇದುವರೆಗೆ 2,06,592 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿರುವ ವಿಪತ್ತು ನಿರ್ವಹಣಾ ಪ್ರಾಧಿಕಾರ, ನೆರೆ ಉಲ್ಬಣಿಸಿದ ಸಂದರ್ಭದಲ್ಲಿ 465 ಕಾಳಜಿ ಕೇಂದ್ರಗಳನ್ನು ತೆರೆದಿತ್ತು. 1,94,790 ಜನರಿಗೆ ಆಶ್ರಯ ನೀಡಿತ್ತು. ಪ್ರಸ್ತುತ 100 ಕಾಳಜಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು, 48,995 ಜನ ಆಶ್ರಯ ಪಡೆದುಕೊಂಡಿದ್ದಾರೆ.

ನೆರೆ ಹಾವಳಿಯಿಂದ ಎಂಟು ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ. ಇದರಲ್ಲಿ ಬೆಳಗಾವಿ, ಉತ್ತರ ಕನ್ನಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ನಷ್ಟವಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರ ಮಾಹಿತಿ ನೀಡಿದೆ.

 ಕರಾವಳಿ ಭಾಗಗಳಲ್ಲಿ ಮಳೆ

ಕರಾವಳಿ ಭಾಗಗಳಲ್ಲಿ ಮಳೆ

ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಮಂಗಳೂರು ಕರಾವಳಿಯಿಂದ ಕರ್ನಾಟಕ ಕರಾವಳಿವರೆಗೆ ಇಂದು ವ್ಯಾಪಕ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.ಮಲೆನಾಡು ಭಾಗದ ಜಿಲ್ಲೆಗಳಲ್ಲೂ ಇಂದು ಮಳೆ ಸುರಿಯಲಿದೆ. ಜೊತೆಗೆ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ.

ಇನ್ನು, ಉತ್ತರ ಒಳನಾಡಿನಲ್ಲೂ ಇಂದು ಸಹ ಸಾಧಾರಣ ಮಳೆಯಾಗಲಿದೆ. ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗುವ ನಿರೀಕ್ಷೆ ಇದೆ.

ರಾಜ್ಯದ ಮಲೆನಾಡು ಭಾಗದಲ್ಲಿ ಇಂದು ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಡುಪಿ ಜಿಲ್ಲೆಯಾದ್ಯಂತ ಅಧಿಕ ಮಳೆಯಾದರೆ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

 ಬೆಂಗಳೂರಿನಲ್ಲೂ ಮಳೆ ಬರಬಹುದು

ಬೆಂಗಳೂರಿನಲ್ಲೂ ಮಳೆ ಬರಬಹುದು

ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಂಭವ ಇದೆ. ಗರಿಷ್ಠ 29 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಭಾನುವಾರ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಿದೆ. ವಿಶೇಷವಾಗಿ ಗೋಕರ್ಣದಲ್ಲಿ 18 ಸೆಂ.ಮೀ, ಶಿವಮೊಗ್ಗ ಜಿಲ್ಲೆ ಹುಂಚದಕಟ್ಟೆಯಲ್ಲಿ 7 ಸೆಂ.ಮೀ. ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ.

 ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯ ತೀರ ಪ್ರದೇಶದಲ್ಲಿ ಪ್ರತಿ ಘಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆಗಸ್ಟ್‌ 11ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.

Recommended Video

    ಹವಾಮಾನ ಇಲಾಖೆಯಿಂದ ಭಾರಿ ಮಳೆ ಸೂಚನೆ! | Oneindia Kannada
     ಯಾವ್ಯಾವ ಭಾಗಗಳಲ್ಲಿ ಮಳೆಯಾಗಿದೆ?

    ಯಾವ್ಯಾವ ಭಾಗಗಳಲ್ಲಿ ಮಳೆಯಾಗಿದೆ?

    ಕೆರೂರು, ಭಾಗಮಂಡಲ, ಸಾಲಿಗ್ರಾಮ, ಜ್ಞಾನಭಾರತಿ, ಕೊಟ್ಟಿಗೆಹಾರ, ಚನ್ನಗಿರಿ, ಕೊಲ್ಲೂರು, ಹುಕ್ಕೇರಿ, ನಿಪ್ಪಾಣಿ, ಸುಂಟಿಕೊಪ್ಪ, ಬೆಳ್ಳೂರು, ಕುಡತಣಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+