ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಮಳೆ

|
Google Oneindia Kannada News

ಬೆಂಗಳೂರು, ನವೆಂಬರ್ 28: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಲ್ಲಿ ಈಗಾಗಲೇ ಮೋಡಕವಿದ ವಾತಾವರಣವಿದ್ದು ತುಂತುರು ಮಳೆಯಾಗುತ್ತಿದೆ. ಎರಡು ದಿನ ಇದೇ ರೀತಿ ವಾತಾವರಣ ಮುಂದುವರೆಯಲಿದೆ.

ಕರ್ನಾಟಕದೆಲ್ಲೆಡೆ ಮೋಡಕವಿದ ವಾತಾವರಣ, ಮಳೆಯ ಮುನ್ಸೂಚನೆ ಕರ್ನಾಟಕದೆಲ್ಲೆಡೆ ಮೋಡಕವಿದ ವಾತಾವರಣ, ಮಳೆಯ ಮುನ್ಸೂಚನೆ

ಇನ್ನೆರೆಡು ದಿನ ಬೆಳಗಿನ ಜಾವ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಬೆಂಗಳೂರಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಲ್ಲಿ ಮಳೆ ಸಾಧ್ಯತೆ

ಬೆಂಗಳೂರಲ್ಲಿ ಮಳೆ ಸಾಧ್ಯತೆ

ಬೆಂಗಳೂರಲ್ಲಿ ಮಳೆಯಾಗುವ ಸಾಧ್ಯತೆ ಇದೆ,ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ತುಂತುರು ಮಳೆಯೂ ಶುರುವಾಗಿದೆ. ನಗರದಲ್ಲಿ ಗರಿಷ್ಠ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.2 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 27.4 ಡಿಗ್ರಿ ಸೆಲ್ಸಿಯಸ್, ಗರಿಷ್ಠ 18.6 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 25.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಕರ್ನಾಟಕದಲ್ಲಿ ಎಲ್ಲೆಲ್ಲಿ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಎಲ್ಲೆಲ್ಲಿ ಮಳೆಯ ಮುನ್ಸೂಚನೆ

ಉತ್ತರ ಒಳನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಒಣಹವೆ ಮುಂದುವರೆಯಲಿದೆ, ದಕ್ಷಿಣ ಒಳನಾಡು, ಕರಾವಳಿಯ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ತಮಿಳುನಾಡಿನಲ್ಲಿ ಮಳೆ

ತಮಿಳುನಾಡಿನಲ್ಲಿ ಮಳೆ

ಕರ್ನಾಟಕ, ಒಡಿಶಾ, ಕೇರಳ, ತಮಿಳುನಾಡುಸೇರಿದಂತೆ ಹಲವೆಡೆ ಮತ್ತೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಮಹಾರಾಷ್ಟ್ರದ ಚಂಬಾ, ಕಾಂಗ್ರಾ, ಮಂಡಿ, ಕುಲ್ಲು, ಶಿಮ್ಲಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹಿಮಾಚಲ ಪ್ರದೇಶದ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹಿಮಾಚಲ ಪ್ರದೇಶ , ಜಮ್ಮು ಕಾಶ್ಮೀರದಲ್ಲಿ ಹಿಮಪಾತ

ಹಿಮಾಚಲ ಪ್ರದೇಶ , ಜಮ್ಮು ಕಾಶ್ಮೀರದಲ್ಲಿ ಹಿಮಪಾತ

ಮುಂದಿನ ಎರಡು ದಿನ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಜಮ್ಮು ಮತ್ತು ಕಾಶ್ಮೀರ , ಹಿಮಾಚಲ ಪ್ರದೇಶ, ಉತ್ತರಾಖಂಡ್ ನಲ್ಲಿ ಹಿಪಾತವಾಗುತ್ತಿದೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶದ, ಕರ್ನಾಟಕದಲ್ಲಿ ಮಳೆಯಾಗಲಿದೆ. ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ, ಒಡಿಶಾ, ಬಿಹಾರ, ಉತ್ತರ ಪ್ರದೇಶ, ಹರ್ಯಾಣ, ರಾಜಸ್ಥಾನ, ಗುಜರಾತ್, ತೆಲಂಗಾಣ, ಛತ್ತೀಸ್‌ಗಢದಲ್ಲಿ ಒಣಹವೆ ಮುಂದುವರೆಯಲಿದೆ.

English summary
The meteorological department has predicted more rain in the Karnataka in the next 24 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X