ದಕ್ಷಿಣ ಒಳನಾಡು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು, ಜನವರಿ 12: ದಕ್ಷಿಣ ಒಳನಾಡು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರಿನ ಅಲ್ಲಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯಾಗುವ ಸಾಧ್ಯತೆ ಇದೆ. 25 ಡಿಗ್ರಿ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದ ಕೆಲವೆಡೆ ಮಳೆಯಾಗಲಿದೆ, ಇನ್ನುಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

Rainfall Will Come 11 Districts Of Karnataka

ಬೀದರ್‌ನಲ್ಲಿ 12.2 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಜನವರಿ 14ರ ಬಳಿಕ ದಕ್ಷಿಣ ಒಳನಾಡು, ಕರ್ನಾಟಕ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ರಾಜ್ಯಾದ್ಯಂತ ಮಳೆ ಬಂದಿರುವ ಕಾರಣ ಚಳಿಯೂ ಕೂಡ ಗಣನೀಯವಾಗಿ ಕಡಿಮೆಯಾಗಿದೆ.

Recommended Video

      Engineering ವಿಧ್ಯಾರ್ಥಿಗಳಿಗೆ ಸಿಹಿ ಸುದ್ದಿ!! ಕೊಟ್ಟ ಎಜುಕೇಶನ್ ಮಿನಿಸ್ಟರ್ | Suresh Kumar | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+