ಕರ್ನಾಟಕದ 9 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆ ಸಾಧ್ಯತೆ
ಬೆಂಗಳೂರು, ಜನವರಿ 11: ಕರ್ನಾಟಕ 9 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ. ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ.
ಪುತ್ತೂರು, ಸಿದ್ದಾಪುರ, ಕೊಲ್ಲೂರು, ಪಣಂಬೂರು, ವಿಟ್ಲದಲ್ಲಿ ಮಳೆಯಾಗಿದೆ.ಬೀದರ್‌ನಲ್ಲಿ 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಲ್ಲಿ ಕೆಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, 27 ಡಿಗ್ರಿ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ದಕ್ಷಿಣ ಕನ್ನಡ ಹಾಗೂ ಮಲೆನಾಡಿನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಪ್ರಮುಖ ಬೆಳೆ ಅಡಿಕೆಗೆ ಭಾರಿ ನಷ್ಟ ಉಂಟು ಮಾಡಿದೆ. ಕೃಷಿಕರ ಪ್ರಮುಖ ಬೆಳೆಯಾದ ಅಡಿಕೆ ಮಳೆಯಿಂದಾಗಿ ಸರಿಯಾಗಿ ಒಣಗದೆ ಕೆಟ್ಟು ಹೋಗುವ ಭೀತಿಯಲ್ಲಿ ರೈತರಿದ್ದಾರೆ.
ಮಾರುಕಟ್ಟೆಯಲ್ಲಿ ಅಡಿಕೆಗೆ ಉತ್ತಮ ಧಾರಣೆ ಇದ್ದರೂ, ಅದರ ಪ್ರಯೋಜನವನ್ನು ಪಡೆಯಲಾಗದ ಸ್ಥಿತಿಗೆ ಅಡಿಕೆ ಕೃಷಿಕರನ್ನು ಅಕಾಲಿಕ ಮಳೆ ತಂದೊಡ್ಡಿದೆ.












Click it and Unblock the Notifications