ಏಪ್ರಿಲ್ 11ರವರೆಗೆ ರಾಜ್ಯದ 14 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಬೆಂಗಳೂರು, ಏಪ್ರಿಲ್ 6: ರಾಜ್ಯದ 12 ಜಿಲ್ಲೆಗಳಲ್ಲಿ ಏಪ್ರಿಲ್ 11ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಏಪ್ರಿಲ್ 5 ರಂದು ಚಾಮರಾಜನಗರದ ಎಂಎಂ ಹಿಲ್ಸ್‌ನಲ್ಲಿ 1 ಸೆಂ.ಮೀ ಮಳೆಯಾಗಿದೆ. ಏಪ್ರಿಲ್ 7 ರಂದು ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ.
ಏಪ್ರಿಲ್ 7ರ ಬಳಿಕ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕಲಬುರಗಿಯಲ್ಲಿ 41.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಯಾವಾಗ ಮಳೆ?
ಕರಾಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಏಪ್ರಿಲ್ 7 ರಿಂದ 11ರವರೆಗೂ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಯಾವ್ಯಾವ ಪ್ರದೇಶಗಳಲ್ಲಿ ಮಳೆ
ಏಪ್ರಿಲ್ 7 ರಂದು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಮಳೆಯಾಗಲಿದ್ದು, ಬಳಿಕ ಒಣಹವೆ ಮುಂದುವರೆಯಲಿದೆ.

ದಕ್ಷಿಣ ಒಳನಾಡಿನ ಯಾವ್ಯಾವ ಜಿಲ್ಲೆಗಳಲ್ಲಿ ಮಳೆ
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
Recommended Video

ಬೆಂಗಳೂರು ಹವಾಮಾನ ವರದಿ
ಬೆಂಗಳೂರಿನಲ್ಲಿ ಆಗಾಗ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತಿದೆ. 35 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 35.3 ಡಿಗ್ರಿ ಸೆಲ್ಸಿಯಸ್, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ ಗರಿಷ್ಠ 34.9 ಡಿಗ್ರಿ ಸೆಲ್ಸಿಯಸ್, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ ಗರಿಷ್ಠ 35.0 ಡಿಗ್ರಿ ಸೆಲ್ಸಿಯಸ್, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications