ಡಿಸೆಂಬರ್ 4ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಬೆಂಗಳೂರು, ನವೆಂಬರ್ 30:ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಡಿಸೆಂಬರ್ 4ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದೆ.

ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಒಣಹವೆ ಮುಂದುವರೆಯಲಿದೆ.

ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಯಾವುದೇ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನಾವು ನೀಡಿಲ್ಲ. ನಮ್ಮ ಪ್ರಕಾರ ಅಲ್ಲಲ್ಲಿ ಅಲ್ಪಸ್ವಲ್ಪ ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಇಂದು ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕೇರಳದಲ್ಲಿ ಸಾಕಷ್ಟು ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಲಕ್ಷದ್ವೀಪ ಮತ್ತು ಕರ್ನಾಟಕದಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಲಡಾಖ್, ಗೋವಾ, ತೆಲಂಗಾಣ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಐಎಂಡಿ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕವು ತಿಂಗಳಿಗೆ 292 ರಷ್ಟು ಹೆಚ್ಚುವರಿ ಮಳೆಯನ್ನು ಪಡೆದಿದೆ. ಈ ವಿಪರೀತ ಮಳೆಯು ಭಾರೀ ಪ್ರವಾಹವನ್ನು ಉಂಟುಮಾಡುತ್ತದೆ, ಇದು ಜೀವಹಾನಿ ಮತ್ತು ಆಸ್ತಿ ಹಾನಿಗೆ ಕಾರಣವಾಗುತ್ತದೆ ಎನ್ನಲಾಗಿದೆ. ಈಶಾನ್ಯ ಮುಂಗಾರಿನಿಂದ ದಕ್ಷಿಣ ಕರ್ನಾಟಕ, ಕೇರಳ, ತಮಿಳುನಾಡು, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣದ ಕೆಲವು ಭಾಗಗಳಲ್ಲಿ ಮಳೆ ಹೆಚ್ಚಾಗಲಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, 24 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 23.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 22.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 22.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ರಾಜ್ಯದ ವಾತಾವರಣ

ರಾಜ್ಯದ ವಾತಾವರಣ

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರದಲ್ಲಿ ಮಳೆಯಾಗಲಿದೆ.ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೀದರ್‌ನಲ್ಲಿ ಒಣಹವೆ ಮುಂದುವರೆಯಲಿದೆ.
 ಕನಿಷ್ಠ ಉಷ್ಣಾಂಶ

ಕನಿಷ್ಠ ಉಷ್ಣಾಂಶ

ಬೀದರ್ ಹಾಗೂ ದಾವಣಗೆರೆಯಲ್ಲಿ ಅತ ಕನಿಷ್ಠ ಉಷ್ಣಾಂಶ 18.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

 ಮೂರು ರಾಜ್ಯಗಳಲ್ಲಿ ಮಳೆ

ಮೂರು ರಾಜ್ಯಗಳಲ್ಲಿ ಮಳೆ

ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವಿದೆ ಮತ್ತು ತಮಿಳುನಾಡು ಕರಾವಳಿ ಮತ್ತು ಆಂಧ್ರಪ್ರದೇಶದ ದಕ್ಷಿಣ ಕರಾವಳಿಯಲ್ಲಿ ಈಶಾನ್ಯ ಮಾರುತಗಳು ಅಪ್ಪಳಿಸಲಿವೆ. ಮುಂದಿನ 4 ದಿನಗಳಲ್ಲಿ ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ದಕ್ಷಿಣ ಒಳನಾಡಿನ ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಇಂದು ವ್ಯಾಪಕವಾದ ಮಳೆಯಾಗುವ ಸಾಧ್ಯತೆಯಿದೆ.

ಕಳೆದ ಬಾರಿ ಇದೇ ರೀತಿಯ ಪರಿಸ್ಥಿತಿ ನವೆಂಬರ್ 2015ರಲ್ಲಿ ಚೆನ್ನೈ ಮತ್ತು ತಮಿಳುನಾಡಿನ ಇತರ ಹಲವು ಪ್ರದೇಶಗಳಲ್ಲಿ ಇದೇ ರೀತಿಯ ವಿಪರೀತ ಮಳೆಗೆ ಸಾಕ್ಷಿಯಾಗಿತ್ತು. ನವೆಂಬರ್ 29ರವರೆಗೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಪ್ರತ್ಯೇಕವಾದ ಅತಿ ಹೆಚ್ಚು ಮಳೆಯಾಗಲಿದೆ. ಇಂದು ಮತ್ತು ನಾಳೆ ದಕ್ಷಿಣ ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾದಲ್ಲಿ ಅತಿ ಹೆಚ್ಚು ಮಳೆ ಬೀಳಲಿದೆ ಎಂದು IMD ಮುನ್ಸೂಚನೆ ನೀಡಿದೆ. ಇಂದು ತಮಿಳುನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Recommended Video

      ಕೃಷಿ ಕಾಯ್ದೆ ರದ್ದತಿ ಮಸೂದೆ ಮಂಡಿಸಲು ಸರ್ಕಾರದ ಸಿದ್ಧತೆ ಹೇಗಿದೆ? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+