ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನವೆಂಬರ್ 29ರವರೆಗೂ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ

|
Google Oneindia Kannada News

ಬೆಂಗಳೂರು, ನವೆಂಬರ್ 25: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ನವೆಂಬರ್ 29ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ಮಳೆಯಾಗಲಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಕೂಡ ಮಳೆಯಾಗಲಿದೆ. ಬೀದರ್, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೊಪ್ಪಳದಲ್ಲಿ ಒಣಹವೆ ಮುಂದುವರೆಯಲಿದೆ.

ಬಂಗಾಳಕೊಲ್ಲಿಯಲ್ಲಿ ಒಂದು ಚಂಡಮಾರುತ ಎದುರಾಗುವ ಸಾಧ್ಯತೆ ಇದ್ದು, ಅದರ ಪ್ರಭಾವದಿಂದ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬುಧವಾರ ತಿಳಿಸಿದೆ.

ಅಲ್ಲದೆ ಮುಂದಿನ ಐದು ದಿನಗಳ ಕಾಲ ದಕ್ಷಿಣ ಭಾರತದ ರಾಜ್ಯಗಳ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಚಂಡಮಾರುತದ ಕೇಂದ್ರ ಬಿಂದು ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ನವೆಂಬರ್ 28ರವರೆಗೆ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಮುಂದುವರಿಕೆನವೆಂಬರ್ 28ರವರೆಗೆ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಮುಂದುವರಿಕೆ

ಇದರ ಪ್ರಭಾವದಿಂದ ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಸಾಧ್ಯತೆಯಿದೆ. ಇದು ಶ್ರೀಲಂಕಾ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ" ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂದಿನ ಐದು ದಿನಗಳಲ್ಲಿ ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಮಾಹೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದ್ದು, ಇನ್ನೂ ಐದು ದಿನ ಕೆಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಕೆಆರ್ ನಗರ, ಮಂಡ್ಯ, ಯಡವಾಡ, ಜಾಲಹಳ್ಳಿ, ಶ್ರವಣಬೆಳಗೊಳ, ಸಿಂದಗಿ, ಆಲಮಟ್ಟಿ, ಮಸ್ಕಿ, ಕೆಂಭಾವಿ, ಕುಶಾಲನಗರ, ಹರಪನಹಳ್ಳಿ, ಸೈದಾಪುರ, ಕವಡಿಮಟ್ಟಿ, ಬೆಂಗಳೂರು, ಬಾದಾಮಿ, ಕೆರೂರು, ಮಹಾಲಿಂಗಪುರ, ಜಮಖಂಡಿ, ಬಾಗಲಕೋಟೆ, ಬೈಲಹೊಂಗಲ, ಅಥಣಿ, ನಾಗಮಂಗಲ, ಮೈಸೂರು, ನಾಪೋಕ್ಲು, ಸೋಮವಾರಪೇಟೆ, ಹಾರಂಗಿ, ಮಡಿಕೇರಿ, ಕೋಣನೂರು, ಬಂಡೀಪುರದಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ. 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್‌ಎಎಲ್‌ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
 ಕನಿಷ್ಠ ಉಷ್ಣಾಂಶ

ಕನಿಷ್ಠ ಉಷ್ಣಾಂಶ

ದಾವಣಗೆರೆಯಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ಮುಂದಿನ 24 ಗಂಟೆಗಳಲ್ಲಿ ಕರಾವಳಿ, ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ಮಳೆಯಾಗಲಿದೆ.

Recommended Video

ೀಂ‌ ಇಂಡಿಯಾ ಆಟಗಾರರ ಮುಂದೆ ಸ್ಪಿನ್ ಕೈಚಳಕ ತೋರಿದ ರಾಹುಲ್ ದ್ರಾವಿಡ್ | Oneindia Kannada

English summary
Meteorological Department Predicted that, Rainfall Will Continue In Karnataka Till November 29.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X