ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಮಳೆಯ ಮುನ್ಸೂಚನೆ

ಬೆಂಗಳೂರು, ನವೆಂಬರ್ 26: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು,ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುನಕೂರಿನಲ್ಲಿ ಮಳೆಯಾಗಲಿದೆ.

ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ಕಲಬುರಗಿ, ಬೀದರ್‌ನಲ್ಲಿ ಒಣಹವೆ ಮುಂದುವರೆಯಲಿದೆ. ಚಂಡಮಾರುತದ ಕೇಂದ್ರ ಬಿಂದು ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಇದರ ಪ್ರಭಾವದಿಂದ ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಸಾಧ್ಯತೆಯಿದೆ. ಇದು ಶ್ರೀಲಂಕಾ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ" ಎಂದು ಹವಾಮಾನ ಇಲಾಖೆ ಹೇಳಿದೆ.

ಮುಂದಿನ ಮೂರು ದಿನಗಳಲ್ಲಿ ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಮಾಹೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದ್ದು, ಇನ್ನೂ ಮೂರು ದಿನ ಕೆಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಸುಮಾರು ಮೂರು ವಾರಗಳ ಬಳಿಕ ರಾಜ್ಯ ರಾಜಧಾನಿಯಲ್ಲಿ ಸೂರ್ಯದೇವ ಇಡೀ ದಿನ ದರ್ಬಾರ್‌ ನಡೆಸಿದ. ಮುಸುಕಿದ್ದ ಮೋಡ ಸರಿದು ಮಂಗಳವಾರ ಬೆಳಗ್ಗೆಯಿಂದಲೇ ಗೋಜರಿಸಿದ ಸೂರ್ಯನ ತೇಜಸ್ಸಿಗೆ ಕಳೆದ ಕೆಲ ದಿನಗಳಿಂದ ಅಬ್ಬರಿಸಿದ್ದ ಕಾರ್ಮೋಡಗಳು ಬದಿಗೆ ಸರಿದಿದ್ದವು. ಇದರಿಂದ ಬಹಳ ದಿನಗಳ ನಂತರ ಬೆಂಗಳೂರಿಗರಿಗೆ ನೀಲಿ ಬಾನಿನ ದರ್ಶನ ಭಾಗ್ಯವಾಯಿತು.

ಸುಮಾರು ಮೂರು ವಾರಗಳ ಬಳಿಕ ರಾಜ್ಯ ರಾಜಧಾನಿಯಲ್ಲಿ ಸೂರ್ಯ ದೇವ ಇಡೀ ದಿನ ದರ್ಬಾರ್‌ ನಡೆಸಿದ. ಮುಸುಕಿದ್ದ ಮೋಡ ಸರಿದು ಬುಧವಾರ ಬೆಳಗ್ಗೆಯಿಂದಲೇ ಸೂರ್ಯ ಕಾಣಿಸಿಕೊಂಡಿದ್ದ.
ಇದರಿಂದ ಬಹಳ ದಿನಗಳ ನಂತರ ಬೆಂಗಳೂರಿಗರಿಗೆ ನೀಲಿ ಬಾನಿನ ದರ್ಶನ ಭಾಗ್ಯವಾಯಿತು. ನಗರದ ನಾಲ್ಕೈದು ಕಡೆ ತುಂತುರು ಮಳೆ ಜಿನುಗಿದ್ದು ಬಿಟ್ಟರೆ ಉಳಿದಂತೆ ನಗರದಾದ್ಯಂತ ಶುಭ್ರ ವಾತಾವರಣ ಇತ್ತು. ಇದರಿಂದ ಕಳೆದ ಕೆಲ ದಿನಗಳಿಂದ ಭಾರಿ ಮಳೆಯ ಅಬ್ಬರಕ್ಕೆ ಸಿಲುಕಿದ್ದ ಜನರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟರು.

 ಮಳೆಯಾಗಿರುವ ಪ್ರದೇಶಗಳು

ಮಳೆಯಾಗಿರುವ ಪ್ರದೇಶಗಳು

ಮೂಡುಬಿದಿರೆ, ಪುತ್ತೂರು, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಪಣಂಬೂರು, ಬೆಳಗಾವಿ ವಿಮಾನ ನಿಲ್ದಾಣ, ತೊಂಡೇಭಾವಿ, ಬುಕ್ಕಪಟ್ಟಣ, ಮಂಗಳೂರು ವಿಮಾನ ನಿಲ್ದಾಣ, ಮಾಣಿ, ಬೆಳ್ತಂಗಡಿ, ಧರ್ಮಸ್ಥಳ, ಹುನಗುಂದ, ದೇವದುರ್ಗ, ಹೊಳೆನರಸೀಪುರ, ಬಂಡೀಪುರ, ಬೆಂಗಳೂರು ನಗರ, ಕುಡತಿನಿ, ರಾಂಪುರ, ಶಿಡ್ಲಘಟ್ಟ, ಗೌರಿಬಿದನೂರು, ಗುಬ್ಬಿ, ಮಧುಗಿರಿ, ಚಿಕ್ಕನಹಳ್ಳಿಯಲ್ಲಿ ಮಳೆಯಾಗಿದೆ.

 ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರು ವಾತಾವರಣ ಹೇಗಿದೆ?

ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ. 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್‌ಎಎಲ್‌ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 27.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
 ಕನಿಷ್ಠ ಉಷ್ಣಾಂಶ

ಕನಿಷ್ಠ ಉಷ್ಣಾಂಶ

ವಿಜಯಪುರದಲ್ಲಿ 18.೪ ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ರಾಜ್ಯದ ವಾತಾವರಣ ಹೇಗಿರಲಿದೆ?

ರಾಜ್ಯದ ವಾತಾವರಣ ಹೇಗಿರಲಿದೆ?

ಮುಂದಿನ 24 ಗಂಟೆಗಳಲ್ಲಿ ಕರಾವಳಿ, ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+